ನ.15 ರಂದು ಬಿ. ವೈ ವಿಜಯೇಂದ್ರ ಬಿಜೆಪಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ

ಬೆಂಗಳೂರು: ರಾಜ್ಯ ಬಿಜೆಪಿ ಪಟ್ಟ‌ವನ್ನು ಹೈಕಮಾಂಡ್ ಬಿ.ವೈ.ವಿಜಯೇಂದ್ರ ಅವರಿಗೆ ನೀಡುತ್ತಿದ್ದಂತೆ ಪಕ್ಷದ ಕೆಲವು ಪ್ರಮುಖ ನಾಯಕರು ಅಸಮಾಧಾನವನ್ನು ಪರೋಕ್ಷವಾಗಿ ಹೊರಹಾಕಿದ್ದಾರೆ.

ಕಾಂಗ್ರೆಸ್ ಪಕ್ಷದ ನಾಯಕರು ಕೂಡ ವಿಜೇಂದ್ರ ಆಯ್ಕೆಯನ್ನು ಟೀಕಿಸಿದ್ದಾರೆ.

ಬಿಜೆಪಿಯಯಲ್ಲಿನ ಅಸಮಾಧಾನ, ಕಾಂಗ್ರೆಸ್ ಟೀಕೆಗಳ ನಡುವೆ ಬಿಜೆಪಿಯ ನೂತನ ಅಧ್ಯಕ್ಷ ವಿಜಯೇಂದ್ರ ಅವರ ಪದಗ್ರಹಣಕ್ಕೆ ಮುಹೂರ್ತ ನಿಗದಿ ಪಡಿಸಲಾಗಿದೆ.

ನವೆಂಬರ್ 15ರ ಬೆಳಗ್ಗೆ 10 ಗಂಟೆಗೆ ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ.

ಬುಧವಾರ ಮಧ್ಯಾಹ್ನ 1 ಗಂಟೆಗೆ ಅರಮನೆ ಮೈದಾನದಲ್ಲಿ ಪದಗ್ರಹಣ ಸಮಾವೇಶ ಕೂಡಾ ನಡೆಯಲಿದೆ.

ನವೆಂಬರ್ 16ರಂದು ವಿಜಯೇಂದ್ರ ಪಕ್ಷದ ಶಾಸಕಾಂಗ ಸಭೆ ನಡೆಸಲು ಚಿಂತನೆ ನಡೆಸಿದ್ದಾರೆ.

ಈ ಬಗ್ಗೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರೊಂದಿಗೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ.