ನಿರ್ಜನ ಪ್ರದೇಶಕ್ಕೆ ಮೋಜು ಮಸ್ತಿಗೆ ತೆರಳಿದ ಯುವತಿ-ಯುವಕರಿಗೆ ಬುದ್ಧಿ ಹೇಳಿದ ಪೆÇಲೀಸರು

ಮೈಸೂರು: ನಿರ್ಜನ ಪ್ರದೇಶದಲ್ಲಿ ಮೋಜು ಮಸ್ತಿಗೆ ತೆರಳಿದ್ದ ಯುವತಿ-ಯುವಕರಿಗೆ ಪೊಲೀಸರು ಬುದ್ಧಿ ಹೇಳಿ ಕಳುಹಿಸಿರುವ ಘಟನೆ ನಗರದಲ್ಲಿ ನಡೆದಿದೆ.

ನಗರದ ಆಲನಹಳ್ಳಿ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ಯುವತಿ, ಯುವಕರು ಮೋಜು ಮಸ್ತಿಗೆ ತೆರಳಿದ್ದನ್ನು ಪೊಲೀಸರು ಪತ್ತೆ ಹಚ್ಚಿ ಅವರಿಗೆ ಬುದ್ಧಿ ಹೇಳಿದ್ದಾರೆ.

ಸೋಮವಾರ ಸಂಜೆ ಆಲನಹಳ್ಳಿ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿನ ನಿರ್ಜನ ಪ್ರದೇಶಕ್ಕೆ ಹೊರ ರಾಜ್ಯದ ನೋಂದಣಿ ಕಾರಿನಲ್ಲಿ ಬಂದ ಮೂವರು ಯುವಕರು ಹಾಗೂ ಓರ್ವ ಯುವತಿ ಮದ್ಯದ ಬಾಟಲಿಗಳ ಜತೆಗೆ ಕಾರಿನಿಂದ ಇಳಿದು ತೆರಳುತ್ತಿರುವುದನ್ನು ಗಮನಿಸಿದ ದಾರಿಹೋಕರು, ಪೆÇಲೀಸರಿಗೆ ಮಾಹಿತಿ ನೀಡಿದರು.

ಮೈಸೂರಿನಲ್ಲಿ ಕೆಲ ದಿನಗಳ ಹಿಂದೆ ವಿದ್ಯಾರ್ಥಿನಿಯೊಬ್ಬರ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ ಘಟನೆ ನಡೆದ ಸ್ಥಳದ ಸಮೀಪದಲ್ಲೇ ಯುವಕ ಯುವತಿಯರು ಮೋಜು ಮಸ್ತಿಗೆ ತೆರಳಿದ್ದರು.

ಫೆÇೀನ್ ಕರೆಯನ್ನಾಧರಿಸಿ ಆಲನಹಳ್ಳಿ ಠಾಣೆ ಪೆÇಲೀಸರು ತಕ್ಷಣ ಸ್ಥಳಕ್ಕೆ ತೆರಳಿ, ನಿರ್ಜನ ಪ್ರದೇಶದಲ್ಲಿದ್ದ ಯುವತಿ ಹಾಗೂ ಯವಕರನ್ನು ಪತ್ತೆ ಹಚ್ಚಿ ಠಾಣೆಗೆ ಕರೆತಂದಿದ್ದಾರೆ.

ಈ ವಿದ್ಯಾರ್ಥಿಗಳು ವೈದ್ಯಕೀಯ ವ್ಯಾಸಂಗ ಮಾಡುತ್ತಿದ್ದು, ಮೋಜು ಮಸ್ತಿಗಾಗಿ ನಿರ್ಜನ ಪ್ರದೇಶಕ್ಕೆ ತೆರಳಿದ್ದರು ಎಂಬುದು ಪೊಲೀಸರ ತನಿಖೆಯಿಂದ ಗೊತ್ತಾಗಿದೆ.

ವಿದ್ಯಾರ್ಥಿಗಳನ್ನು ವಿಚಾರಣೆ ನಡೆಸಿದ ಬಳಿಕ, ಪೆÇಲೀಸರು ಅವರ ಪೆÇೀಷಕರಿಗೂ ಕರೆ ಮಾಡಿ ಮಾಹಿತಿ ನೀಡಿ ಎಚ್ಚರಿಕೆ ನೀಡಿದ್ದಾರೆ.

ಮೈಸೂರು ನಗರ ಪೆÇಲೀಸ್ ಆಯುಕ್ತ ಡಾ.ಚಂದ್ರಗುಪ್ತ ಅವರೇ ರಿಂಗ್ ರಸ್ತೆ ಹಾಗೂ ನಗರದ ಹೊರ ವಲಯದ ನಿರ್ಜನ ಪ್ರದೇಶಗಳಿಗೆ ತೆರಳಿ ಪರಿಶೀಲನೆ ನಡೆಸುತ್ತಿದ್ದು, ವಿದ್ಯಾರ್ಥಿನಿ ಅತ್ಯಾಚಾರ ಪ್ರಕರಣದ ಬಳಿಕ ಎಚ್ಚೆತ್ತುಕೊಂಡಿರುವ ಮೈಸೂರು ಪೆÇಲೀಸರು ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದ್ದಾರೆ.