ಮೈಸೂರು: ಮೈಸೂರು ನಗರ ಪೆÇಲೀಸ್ ಆಯುಕ್ತ ಡಾ. ಚಂದ್ರಗುಪ್ತ ಅವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.
ಕಳೆದೆರಡು ದಿನಗಳ ಹಿಂದೆ ಟೆಸ್ಟ್ ಗಾಗಿ ಪೆÇಲೀಸ್ ಆಯುಕ್ತರು ಸ್ಯಾಂಪಲ್ ನೀಡಿದ್ದರು. ಸೋಮವಾರ ಬಂದ ವರದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ.
ಪೆÇಲೀಸ್ ಆಯುಕ್ತ ಡಾ.ಚಂದ್ರಗುಪ್ತ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪೆÇಲೀಸ್ ಆಯುಕ್ತರೊಂದಿಗೆ ನಗರದ ಎನ್.ಆರ್.ವಿಭಾಗದ ಎಸಿಪಿ ಶಿವಶಂಕರ್ ಅವರಿಗೂ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.
ಎಸಿಪಿ ಶಿವಶಂಕರ್ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.