ತಿರುವನಂತಪುರಂ: ಕೇರಳದಲ್ಲಿನ ಪದ್ಮನಾಭಸ್ವಾಮಿ ದೇವಸ್ಥಾನಕ್ಕೆ ಭಕ್ತರ ಪ್ರವೇಶವನ್ನು ನಿರ್ಬಂಧಿಸಲಾಗಿದೆ.
ದೇವಾಲಯದ ಅರ್ಚಕರು ಸೇರಿದಂತೆ 10 ಮಂದಿ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಭಕ್ತರ ಪ್ರವೇಶವನ್ನು ಅ. 15ರ ವರೆಗೆ ನಿಷೇಧಿಸಲಾಗಿದೆ.
ದೇವಸ್ಥಾನದ ಪ್ರಧಾನ ಅರ್ಚಕ ಪೆರಿಯಾನಂಬಿ ಅವರಿಗೆ ಕೊರೊನಾ ಸೋಂಕು ತಗುಲಿದೆ. ಹಾಗಾಗಿ ತಂತ್ರಿ ಸರನನೆಲ್ಲೂರ್ ಸತೀಸನ್ ನಂಬೂದಿರಿಪ್ಪಡು ಅವರು ಪೂಜಾ ಕಾರ್ಯಗಳನ್ನು ನಡೆಸಲಿದ್ದಾರೆ.
ದೇವಾಲಯದಲ್ಲಿ ಎಂದಿನಂತೆ ಪೂಜಾ ಕೈಂಕರ್ಯಗಳು ನಡೆಯಲಿದೆ ಆದರೆ ಭಕ್ತರಿಗೆ ಪ್ರವೇಶಾವಕಾಶ ಇರುವುದಿಲ್ಲ.