ಹಾಸನ: ಪೆÇಲೀಸ್ ಇಲಾಖೆ ಮತ್ತು ಜನರ ನಡುವೆ ಭಯದ ಬದಲು ಸ್ನೇಹತ್ವ ಬೆಳೆಸಿಕೊಳ್ಳಬೇಕು ಎಂದು ದಕ್ಷಿಣ ವಲಯ ಪೆÇಲೀಸ್ ಮಹಾನಿರೀಕ್ಷಕ ವಿಪುಲ್ ಕುಮಾರ್ ಅವರು ತಿಳಿಸಿದರು.
ನಗರದ ಅಂಬೇಡ್ಕರ್ ಭವನದಲ್ಲಿ ಮಂಗಳವಾರ ಅವರು ಜನ ಸಂಪರ್ಕ ಸಭೆ ನಡೆಸಿ ಪೆÇಲೀಸ್ ಇಲಾಖೆಗೆ ಸಂಬಂಧಿಸಿದ ಕುಂದು ಕೊರತೆಗಳನ್ನು ಆಲಿಸಿದರು.
ಕಾನೂನು ಸೇವೆಗೆ ಸಂಬಂಧಿಸಿದಂತೆ ಸಾರ್ವಜನಿಕ ಸಮಸ್ಯೆಗಳನ್ನು ಬಗೆಹರಿಸಲು ಪೆÇಲೀಸ್ ಇಲಾಖೆ ಸದಾ ಸಿದ್ದವಿದ್ದು ಜನಸಾಮಾನ್ಯರು ಇಲಾಖೆಯೊಂದಿಗೆ ಸಹಕರಿಸಬೇಕು ಎಂದು ತಿಳಿಸಿದರು.
ಜನರು ಸಂಚಾರ ನಿಯಮಗಳನ್ನು ಪಾಲಿಸುವುದರ ಜೊತೆಗೆ ಹೆಲ್ಮೆಟ್ ಹಾಗೂ ಮಾಸ್ಕ್ ಗಳನ್ನು ಕಡ್ಡಾಯವಾಗಿ ಧರಿಸಬೇಕು ಮತ್ತು ಸಿಗ್ನಲ್ ಗಳಲ್ಲಿ ತಾಳ್ಮೆಯಿಂದ ವರ್ತಿಸಬೇಕು ಎಂದರು.
ಜಿಲ್ಲೆಯಲ್ಲಿ ಅಪರಾಧಿಗಳ ನಿಯಂತ್ರಣಕ್ಕೆ ಪೆÇಲೀಸ್ ಇಲಾಖೆ ಶ್ರಮಿಸುತ್ತಿದೆ. ಸಾರ್ವಜನಿಕರು ತಮ್ಮಲ್ಲಿರುವ ಮಾಹಿತಿ ಹಂಚಿಕೊಂಡು ಅಪರಾಧಿಗಳ ಪತ್ತೆಗೆ ಸಹಕರಿಸಬೇಕು ಎಂದು ವಿಪುಲ್ ಕುಮಾರ್ ತಿಳಿಸಿದರು.
ಸಭೆಯಲ್ಲಿದ್ದ ಸಾರ್ವಜನಿಕರು ತಮ್ಮ ಅಹವಾಲು ಸಲ್ಲಿಸಿದರು. ಇದಕ್ಕೆ ವಿಪುಲ್ ಕುಮಾರ್ ಹಾಗೂ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸ್ ಗೌಡರವರು ಉತ್ತರಿಸಿದರು.
ಸಭೆಯಲ್ಲಿ ಡಿ.ವೈ.ಎಸ್ಪಿ ಪುಟ್ಟಸ್ವಾಮಿಗೌಡ ರವರು ಉಪಸ್ಥಿತರಿದ್ದರು.