ದೆಹಲಿ: ಕೆಲ ದಿನಗಳಿಂದ ಅನಾರೋಗ್ಯಕ್ಕೊಳಗಾಗಿದ್ದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಸೋಮವಾರ ಸಂಜೆ ನಿಧನ ಹೊಂದಿದ್ದಾರೆ.
ಪ್ರಣಬ್ ಮುಖರ್ಜಿ (84) ಅವರನ್ನು ಭಾರತೀಯ ಸೇನೆಯ ರೀಸರ್ಚ್ ಅಂಡ್ ರೆಫೆರೆಲ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಪ್ರಣಬ್ ಮುಖರ್ಜಿ ಅವರಿಗೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಮಿದುಳಿನಲ್ಲಿ ರಕ್ತ ಹೆಪ್ಪುಗಟ್ಟಿ ಸಮಸ್ಯೆ ಉಂಟಾಗಿತ್ತು. ಹೀಗಾಗಿ ಅವರಿಗೆ ತುರ್ತಾಗಿ ಮಿದುಳು ಚಿಕಿತ್ಸೆಯನ್ನು ಮಾಡಲಾಗಿತ್ತು.
ಮಿದುಳು ಶಸ್ತ್ರ ಚಿಕಿತ್ಸೆ ನಂತರ ಅವರಿಗೆ ವೆಂಟಿಲೇಟರ್ ಮೂಲಕ ಉಸಿರಾಟದ ವ್ಯವಸ್ಥೆ ಮಾಡಲಾಗಿತ್ತು.
1935ರ ಡಿಸೆಂಬರ್ 11ರಂದು ಬಂಗಾಳದಲ್ಲಿ ಪ್ರಣಬ್ ಮುಖರ್ಜಿ ಜನಿಸಿದ್ದರು. 2012ರಿಂದ 2017ರವರೆಗೆ ಭಾರತದ 13ನೇ ರಾಷ್ಟ್ರಪತಿಗಳಾಗಿದ್ದರು.
ಮುಖರ್ಜಿ ಅವರು ವಿದೇಶಾಂಗ ಸಚಿವ, ರಕ್ಷಣಾ ಸಚಿವ ಮತ್ತು ಹಣಕಾಸು ಸಚಿವರಾಗಿಯೂ ಕೆಲಸ ಮಾಡಿದ್ದರು.
ಮುಖರ್ಜಿ ಅವರು ಪರ್ತಕರ್ತರಾಗಿ, ಕಾಲೇಜು ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ್ದರು.
ಭಾರತದ ಪದ್ಮ ವಿಭೂಷಣ ಪ್ರಶಸ್ತಿಗೆ ಪ್ರಣವ್ ಮುಖರ್ಜಿ ಬಾಜನರಾಗಿದ್ದರು.
2019ರಲ್ಲಿ ಮುಖರ್ಜಿ ಅವರಿಗೆ ಭಾರತ ರತ್ನ ನೀಡಿ ಗೌರವಿಸಲಾಗಿತ್ತು.
ಇಬ್ಬರು ಪುತ್ರರು ಓರ್ವ ಪುತ್ರಿಯನ್ನು ಮುಖರ್ಜಿ ಅವರು ಅಗಲಿದ್ದಾರೆ.