ಬೆಂಗಳೂರು: ನಮ್ಮ ನೆಲದಲ್ಲಿ ರಾಯಣ್ಣನ ಪ್ರತಿಮೆ ಸ್ಥಾಪನೆಗೆ ಯಾವ ದೊಣ್ಣೆ ನಾಯಕನ ಅಪ್ಪಣೆಯೂ ಬೇಕಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರು ಹೇಳಿದ್ದಾರೆ.
ಈ ಕುರಿತು ಹೆಚ್.ಡಿಕೆ. ಟ್ವಿಟ್ ಮಾಡಿದ್ದಾರೆ.
ಬೆಳಗಾವಿ ಜಿಲ್ಲೆ ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಟಾಪನೆಗೆ ವಿರೋಧಿಸಿ ಮರಾಠೀ ಭಾಷಿಗರು ದಾಂಧಲೆ ನಡೆಸಿದ್ದು ಅಕ್ಷಮ್ಯ. ನಮ್ಮ ನೆಲದಲ್ಲಿ ಅಪ್ರತಿಮ ಹೋರಾಟಗಾರ ರಾಯಣ್ಣನ ಪ್ರತಿಮೆ ಸ್ಥಾಪನೆಗೆ ಯಾವ ದೊಣ್ಣೆ ನಾಯಕನ ಅಪ್ಪಣೆಯೂ ಬೇಕಿಲ್ಲ ಎಂದಿದ್ದಾರೆ.
ಎಂಇಎಸ್, ಶಿವಸೇನೆ ಅಥವಾ ಮತ್ಯಾರೇ ಆಗಲಿ ನಮ್ಮ ನಾಡಿನ ಹೆಮ್ಮೆಯ ವೀರಪುತ್ರ ಸಂಗೊಳ್ಳಿ ರಾಯಣ್ಣನಿಗೆ ಅಪಮಾನ ಮಾಡಿದರೆ ಕನ್ನಡಿಗರ ಸಹನೆ ಪರೀಕ್ಷಿಸಿದಂತೆ. ಇಂತಹ ಉದ್ಧಟತನಗಳನ್ನು ಕನ್ನಡಿಗರು ಸಹಿಸುವುದಿಲ್ಲ ಎಂದು ಎಚ್ಚರಿಸುವೆ ಎಂದು ಹೆಚ್.ಡಿ.ಕೆ. ಟ್ವೀಟ್ ನಲ್ಲಿ ಬರೆದಿದ್ದಾರೆ.
ನಮ್ಮ ನಾಡಿನ ನೆಲ-ಜಲ, ಭಾಷೆ ಮತ್ತು ಗಡಿ ವಿಷಯದಲ್ಲಿ ರಾಜಿಯ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.