ಬೆಂಗಳೂರು: ನಂದಿನಿ ತುಪ್ಪ ಹೊರತುಪಡಿಸಿ, ರಾಜ್ಯದಲ್ಲಿ ಮಾರಾಟವಾಗುತ್ತಿರುವ ಉಳಿದ ತುಪ್ಪದ ಸ್ಯಾಂಪಲ್ಗಳನ್ನು ಸಂಗ್ರಹಿಸಿ ಅದರ ಗುಣಮಟ್ಟ ಕಾಪಾಡಲು ಪರಿಶೀಲನೆ ಮಾಡಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚಿಸಿದ್ದಾರೆ.
ಪ್ರಸಾದಗಳ ಸ್ಯಾಂಪಲ್ ಪರಿಶೀಲನೆ ಅಲ್ಲ, ನೇರವಾಗಿ ತುಪ್ಪವನ್ನೇ ಪರಿಶೀಲನೆ ಮಾಡಬೇಕೆಂದು ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಇಲಾಖೆಗೆ ಸಚಿವರು ಸೂಚನೆ ನೀಡಿದ್ದಾರೆ.
ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬಳಸುತ್ತಿರುವ ತುಪ್ಪದ ಬಗ್ಗೆ ತಪಾಸಣೆ ಮಾಡಲು ನಮ್ಮ ಆಹಾರ ಸುರಕ್ಷತಾ ಆಯುಕ್ತರಿಗೆ ಹೇಳಿದ್ದೇನೆ. ಈಗಾಗಲೇ ಸ್ಯಾಂಪಲ್ ಕಲೆಕ್ಟ್ ಮಾಡುವ ಪ್ರಕ್ರಿಯೆ ಪ್ರಾರಂಭವಾಗಿದೆ ಎಂದು ತಿಳಿಸಿದರು.
ತಿರುಪತಿ ಲಡ್ಡು ತಯಾರಿಕೆಯಲ್ಲಿ ಕೊಬ್ಬಿನ ಅಂಶ ಬಳಕೆಯಾಗಿದೆ ಎಂಬ ವಿಚಾರದಿಂದ ರಾಜ್ಯದಲ್ಲೂ ಎಚ್ಚರಿಕೆ ವಹಿಸಲಾಗಿದೆ, ಇಲ್ಲಿ ಬಳಕೆಯಾಗುತ್ತಿರುವ ತುಪ್ಪದಲ್ಲಿ ಕೊಬ್ಬಿನ ಇದೆಯೆ ಎಂಬುದನ್ನು ಪರಿಶೀಲಿಸ ಲಾತ್ತಿದೆ, ತಮಿಳುನಾಡು ಸೇರಿದಂತೆ ಬೇರೆ ಬೇರೆ ರಾಜ್ಯಗಳಿಂದ ಇಲ್ಲಿಗೆ ತುಪ್ಪ ಬರುತ್ತದೆ, ಎಲ್ಲಾ ಸ್ಯಾಂಪಲ್ಗಳನ್ನು ಸಂಗ್ರಹಿಸಿ ಪರಿಶೀಲಿಸಲು ಹೇಳಿದ್ದೇನೆ ಎಂದು ಮಾಹಿತಿ ನೀಡಿದರು.
ಪ್ರಸಾದದ ಪರಿಶೀಲನೆ ನಾವು ಮಾಡುತ್ತಿಲ್ಲ. ಬೇರೆ ಪದಾರ್ಥಗಳಲ್ಲಿ ಕಲಬೆರಕೆ ಆಗುವ ಸಾಧ್ಯತೆ ಕಡಿಮೆ. ಆದರೆ ಆಂಧ್ರ ಮುಖ್ಯಮಂತ್ರಿ ತುಪ್ಪದಲ್ಲಿ ಬೇರೆ ಬೇರೆ ಕೊಬ್ಬಿನಾಂಶ ಇತ್ತೆಂದು ಹೇಳಿರುವುದು ಆತಂಕಕಾರಿ ಯಾದ ವಿಚಾರ. ಒಬ್ಬ ಸಿಎಂ ಹೇಳಿದ ಮೇಲೆ ನಾವು ಅದನ್ನು ಗಂಭೀರವಾಗಿ ಪರಿಗಣಿಸಲೇ ಬೇಕಿದೆ ದೇವರ ಬಗ್ಗೆ ಶ್ರದ್ಧೆ ಇರೋರಿಗೆ ಈ ವಿಚಾರ ಬಹಳ ಆಘಾತಕಾರಿಯಾಗಿದೆ,ಹಾಗಾಗಿ ರಾಜ್ಯದಲ್ಲಿ ಪರಿಶೀಲನೆ ಮಾಡಿ ಎಂದು ಹೇಳಿದ್ದೇವೆ ಎಂದು ಸಚಿವರು ತಿಳಿಸಿದರು.
ಜನರಿಗೆ ಈ ವಿಚಾರದಲ್ಲಿ ಬಹಳ ಗೊಂದಲ ಶುರುವಾ ಗಿದೆ, ತಿರುಪತಿ ಲಡ್ಡು ವಿಚಾರದಲ್ಲಿ ಈ ರೀತಿ ಇದೆ ಎಂದು ಆದಾಗ ಯಾರನ್ನ ನಂಬಬೇಕು ಅನ್ನುವ ಪ್ರಶ್ನೆ ಎದುರಾಗಿದೆ. ನಾಳೆ ಪ್ರಸಾದವನ್ನು ಸ್ವೀಕರಿಸದೆ ಇರುವಂತ ಪರಿಸ್ಥಿತಿ ಎದುರಾಗಬಹುದು. ಹಾಗಾಗಿ ನಮ್ಮ ಕಡೆಯಿಂದ ಪರಿಶೀಲನೆ ಮಾಡಿಸುತ್ತಿದ್ದೇವೆ. ಮೊದಲು ವರದಿ ಬರಲಿ ನೋಡೋಣ ಏನೇನು ಕ್ರಮ ತೆಗೆದುಕೊಳ್ಳಬಹುದೊ ಅದನ್ನೆಲ್ಲಾ ತೆಗೆದುಕೊಳ್ಳ ಲಾಗುವುದು ಎಂದು ದಿನೇಶ್ ಗುಂಡೂರಾವ್ ತಿಳಿಸಿ ದರು.