ನವದೆಹಲಿ: ಕೃಷಿ ಮಸೂದೆ ಸಂಬಂಧ ರಾಜ್ಯಸಭೆಯಲ್ಲಿ ಉಂಟಾದ ಕೋಲಾಹಲ ಹಿನ್ನೆಲೆಯಲ್ಲಿ 8 ಮಂದಿ ರಾಜ್ಯಸಭಾ ಸದಸ್ಯರನ್ನು ರಾಜ್ಯಸಭಾ ಅಧ್ಯಕ್ಷ ವೆಂಕಯ್ಯನಾಯ್ಡು ಅವರು ಅಮಾನತುಗೊಳಿಸಿದ್ದಾರೆ.
ರಾಜ್ಯಸಭಾ ಸದಸ್ಯರಾದ ಡೆರೆಕ್ ಒ ಬ್ರಿಯಾನ್, ಸಂಜಯ್ ಸಿಂಗ್, ರಾಜು ಸತವ್, ಕೆ.ಕೆ.ರಾಗೇಶ್, ರಿಪೂನ್ ಬೋರಾ, ಡೋಲಾ ಸೇನ್, ಸೈಯದ್ ನಜೀರ್ ಹುಸೇನ್ ಮತ್ತು ಎಲಮರನ್ ಕರೀಮ್ ಅಮಾನತ್ತಿಗೊಳಗಾದವರು.
ಈ 8 ಮಂದಿ ರಾಜ್ಯಸಭಾ ಸದಸ್ಯರನ್ನು 1 ವಾರಗಳ ಕಾಲ ರಾಜ್ಯಸಭಾ ಅಧ್ಯಕ್ಷ ಎಂ.ವೆಂಕಯ್ಯ ನಾಯ್ಡು ಅವರು ಅಮಾನತುಮಾಡಿದ್ದಾರೆ.
ಕಲಾಪಕ್ಕೆ ಅಡ್ಡಿ ಮತ್ತು ಉಪ ಸಭಾಪತಿ ಅವರನ್ನು ಅನುಚಿತವಾಗಿ ನಡೆಸಿಕೊಂಡ ಆರೋಪ ಮತ್ತು ಅಶಿಸ್ತಿನ ವರ್ತನೆ ಮೇರೆಗೆ
ಈ 8 ಮಂದಿಯನ್ನು ಅಮಾನತ್ತುಗೊಳಿಸಲಾಗಿದೆ ಎಂದು ಎಂ.ವೆಂಕಯ್ಯ ನಾಯ್ಡು ಅವರು ಹೇಳಿದ್ದಾರೆ.