ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಸರೆಯಾಗಿ ನ್ಯಾಯಾಂಗ ಬಂಧನದಲ್ಲಿರುವ ನಟಿ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾನಿ ಇನ್ನೆರೆಡು ದಿನ ಜೈಲಿನಲ್ಲಿಯೇ ಇರಬೇಕಾಗಿದೆ.
ಪ್ರಕರಣಕ್ಕೆ ಸಂಬಂಧಿಸಿ ಆಕ್ಷೇಪಣೆ ಸಲ್ಲಿಕೆಗೆ ಪಬ್ಲಿಕ್ ಪ್ರಾಸಿಕ್ಯೂಟರ್ ಕಾಲಾವಕಾಶ ಕೇಳಿದ್ದರಿಂದ ನ್ಯಾಯಾಲಯ ವಿಚಾರಣೆಯನ್ನು ಸೆ. 21ಕ್ಕೆ ಮುಂದೂಡಿದೆ.
ಈ ಇಬ್ಬರು ನಟಿಯರ ಜಾಮೀನು ಅರ್ಜಿ ವಿಚಾರಣೆಯನ್ನು 33ನೇ ಸೆಷನ್ಸ್ ನ್ಯಾಯಾಲಯ 2 ದಿನಕ್ಕೆ ಮುಂದೂಡಿದೆ.
ಇದೇ ಪ್ರಕರಣದ ಆರೋಪಿ ನಂ. 1 ಶಿವಪ್ರಕಾಶ್ ಅಲಿಯಾಸ್ ಚಿಪ್ಪಿ ವಿಚಾರಣೆಯೂ ಮುಂದೂಡಿಕೆಯಾಗಿದೆ.