ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಗೌಡ ಜಾಮೀನು‌ ವಜಾ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿರುವ ಪವಿತ್ರಾ ಗೌಡ ಅವರ ಜಾಮೀನು ಅರ್ಜಿಯನ್ನು ಸಿಟಿ ಸಿವಿಲ್ ಮತ್ತು ಸೆಷನ್ಸ್‌ ನ್ಯಾಯಾಲಯ ವಜಾಗೊಳಿಸಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಪವಿತ್ರಾ ಗೌಡ ಹಾಗೂ ಮತ್ತೊಬ್ಬ ಆರೋಪಿ ಅನುಕುಮಾರ್ ಅವರು ಜಾಮೀನು ಕೋರಿ ಕೋರ್ಟ್ ಗೆ ಅರ್ಜಿ‌ ಸಲ್ಲಿಸಿದ್ದರು.

ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ‌‌ ನ್ಯಾಯಾಲಯ ಆದೇಶವನ್ನು‌ ಶನಿವಾರಕ್ಕೆ ಕಾಯ್ದಿರಿಸಿತ್ತು.

ಇಬ್ಬರ ಜಾಮೀನು ಅರ್ಜಿಯನ್ನು ವಜಾಗೊಳಿಸಿ ತೀರ್ಪು ನೀಡಿದೆ.

ಪವಿತ್ರಾ ಗೌಡ ಪರವಾಗಿ ವಾದ ಮಂಡಿಸಿದ್ದ ಹಿರಿಯ ವಕೀಲ ಸೆಬಾಸ್ಟಿಯನ್ ಅವರು, ಪವಿತ್ರಾಗೌಡಗೂ ದರ್ಶನ್​ಗೆ ಒಂದು ರೀತಿಯ ಸಂಬಂಧ ಇರಬಹುದು. ಆದರೆ ರೇಣುಕಾಸ್ವಾಮಿ ಕೊಲೆಯಲ್ಲಿ ‌ಪವಿತ್ರಾಗೌಡ ಯಾವುದೇ ಪಾತ್ರ ವಹಿಸಿಲ್ಲ ಮತ್ತು ಮಹಿಳೆ ಎಂಬ ಕಾರಣಕ್ಕೆ ಜಾಮೀನು ನೀಡಬೇಕು ಎಂದು ಮನವಿ ಮಾಡಿದ್ದರು.

ಆದರೆ ಕೊಲೆ ನಡೆದ ದಿನ ಸ್ಥಳದಲ್ಲಿ ಪವಿತ್ರಗೌಡ ಇದ್ದರು ಎಂಬುದಕ್ಕೆ ಸಾಕ್ಷಿಗಳಿವೆ ಎಂದು ಎಸ್‌ಪಿಪಿ ವಾದ ಮಂಡಿಸಿದರು.
ಪವಿತ್ರಗೌಡ ಶೆಡ್‌ಗೆ ಹೋಗಿಯೇ ಇಲ್ಲ ಅನ್ನುತ್ತಾರೆ ಆದರೆ, ಪವಿತ್ರಗೌಡರನ್ನು ದರ್ಶನ್ ಕರೆದೊಯ್ಯುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ.ಆಕೆಯ ಚಪ್ಪಲಿಯಲ್ಲಿ ರಕ್ತದ ಕಲೆ ಪತ್ತೆಯಾಗಿದೆ, ಎಫ್‌ಎಸ್‌ಎಲ್ ವರದಿಯಲ್ಲೂ ದೃಢಪಟ್ಟಿದೆ.
ರೇಣುಕಾಸ್ವಾಮಿಗೆ ಎಲೆಕ್ಟ್ರಿಕ್‌ ಶಾಕ್ ನೀಡಲಾಗಿದೆ, ಇದರಿಂದ 39 ಕಡೆ ಗಾಯ ಆಗಿದೆ.ಘಟನಾ ಸ್ಥಳದಲ್ಲಿ ಆರೋಪಿಗಳ ಇರುವಿಕೆ ಬಗ್ಗೆ ಸಾಕ್ಷ್ಯ ಇದೆ ತನಿಖೆ ಇನ್ನೂ ಮುಕ್ತಾಯ ಆಗಿಲ್ಲ, ಆದ್ದರಿಂದ ಆರೋಪಿಗಳಿಗೆ ಜಾಮೀನು ನೀಡಬಾರದೆಂದು ಆಕ್ಷೇಪ ವ್ಯಕ್ತಪಡಿಸಿದ್ದರು.

ಒಟ್ಟಾರೆ‌ ಪವಿತ್ರಗೌಡಾಗೆ ಜಾಮೀನು ಸಿಗಲಿಲ್ಲ,ಜೈಲೇ ಗತಿ.