ಆರ್‌ಜಿ ಕಾರ್ ಆಸ್ಪತ್ರೆಯ ಡಾ.ಸಂದೀಪ್ ಘೋಷ್‌ ಬಂಗಲೆ ಮೇಲೆ ಇಡಿ ದಾಳಿ

ಕೋಲ್ಕತಾ: ಆರ್‌ಜಿ ಕಾರ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಡಾ.ಸಂದೀಪ್ ಘೋಷ್‌ಗೆ ಸೇರಿದ ಐಷಾರಾಮಿ‌ ಬಂಗಲೆ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಪಶ್ಚಿಮ‌ ಬಂಗಾಳದ ದಕ್ಷಿಣ 24 ಪರಗಣದಲ್ಲಿ ಐಷಾರಾಮಿ ಬಂಗಲೆಯನ್ನು ಇಡಿ ಅಧಿಕಾರಿಗಳು ಪತ್ತೆ ಮಾಡಿ ರೈಡ್ ಮಾಡಿದ್ದು ಸಂಸ್ಥೆಯಲ್ಲಿನ ಆರ್ಥಿಕ ಅಕ್ರಮಗಳ ಕುರಿತು ನಡೆಯುತ್ತಿರುವ ತನಿಖೆಯ ಭಾಗವಾಗಿ ಈ ದಾಳಿ ನಡೆಸಲಾಗಿದೆ.

ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದ ಹಣಕಾಸಿನ ಅಕ್ರಮಗಳ ಕುರಿತು ಜಾರಿ ಇಡಿ ತನಿಖೆ ನಡೆಸುತ್ತಿದೆ.

ಅಲ್ಲಿನ ತರಬೇತಿ ವೈದ್ಯೆಯ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಸಂಬಂಧ ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಎರಡು ಅಂತಸ್ತಿನ ಐಶಾರಾಮಿ ಬಂಗಲೆಗೆ ತನಿಖಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.

ಈ ಆಸ್ತಿ ಮಾಜಿ ಆರ್‌ಜಿ ಕರ್ ಪ್ರಾಂಶುಪಾಲ ಡಾ.ಸಂದೀಪ್ ಘೋಷ್ ಮತ್ತು ಅವರ ಪತ್ನಿ ಸಂಗೀತಾ ಘೋಷ್ ಅವರಿಗೆ ಸೇರಿದೆ ಎಂದು ಮೂಲಗಳು ತಿಳಿಸಿವೆ.

ಕ್ಯಾನಿಂಗ್‌ನಲ್ಲಿರುವ ಐಷಾರಾಮಿ ಬಂಗಲೆಯ ಸುತ್ತ ನೂರಾರು ಎಕರೆ ಖಾಲಿ ಭೂಮಿ ಕೂಡಾ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.