ಮೈಸೂರು: ಮೈಸೂರು ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿ ಅವರನ್ನು ರಾಜ್ಯ ಸರಕಾರ ನೇಮಿಸಿದೆ.
ಜಿಲ್ಲಾಧಿಕಾರಿ ಆಗಿದ್ದ ಶರತ್ ಕುಮಾರ್ ಅವರಿಗೆ ಯಾವುದೇ ಹುದ್ದೆಯನ್ನು ತೋರಿಸಿಲ್ಲ.
ಕಳೆದ ಒಂದು ತಿಂಗಳ ಹಿಂದಷ್ಟೇ ಜಿಲ್ಲೆಗೆ ಆಗಮಿಸಿದ್ದ ಜಿಲ್ಲಾಧಿಕಾರಿ ಶರತ್ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಬಿಜೆಪಿ ಸರಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ನಂತರ ಮೂರನೇ ಬಾರಿ ರೋಹಿಣಿ ಸಿಂಧೂರಿ ವರ್ಗಾವಣೆಗೊಳ್ಳುತ್ತಿದ್ದಾರೆ. ಈ ಹಿಂದೆ ಅವರು ಧಾರ್ಮಿಕ ಮತ್ತು ದತ್ತಿ ಇಲಾಖೆಯ ಆಯುಕ್ತೆಯಾಗಿ ಕಾರ್ಯನಿರ್ವಹಿಸುತ್ತಿದ್ದರು.