ಜಿಲ್ಲಾಧಿಕಾರಿ ಶರತ್ ವರ್ಗಾವಣೆ: ಶಾಸಕ ಸಾರಾ ಮಹೇಶ್ ಆಕ್ಷೇಪ

ಮೈಸೂರು, ಸೆ. 29- ಮೈಸೂರಿನ ಜಿಲ್ಲಾಧಿಕಾರಿ ಬಿ. ಶರತ್ ವರ್ಗಾವಣೆ ವಿರೋಧಿಸಿ ಶಾಸಕ ಸಾ.ರಾ.ಮಹೇಶ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿ ಮಂಗಳವಾರ ತಮ್ಮ ಕಚೇರಿಯಲ್ಲಿ ಶಾಸಕ ಸಾ.ರಾ.ಮಹೇಶ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.
ಮೈಸೂರು ದಸರಾ ಉನ್ನತಮಟ್ಟದ ಮಟ್ಟದ ಸಭೆ ನಡೆದ ಬಳಿಕ, ದಸರಾ ವಿಶೇಷಾಧಿಕಾರಿಯಾಗಿರುವ ಜಿಲ್ಲಾಧಿಕಾರಿಯನ್ನೇ ವರ್ಗಾವಣೆ ಮಾಡಿರುವುದು ಇದೇ ಮೊದಲು ಎಂದು ಸಾ.ರಾ.ಮಹೇಶ್ ಟೀಕಿಸಿದರು.
ಕೇವಲ 29 ದಿನಗಳ ಅವಧಿಯಲ್ಲಿ ಜಿಲ್ಲಾಧಿಕಾರಿಯೊಬ್ಬರನ್ನು ಮೈಸೂರಲ್ಲಿ ವರ್ಗಾವಣೆ ಮಾಡಿಲ್ಲ ಎಂದರು.
ಆಂಧ್ರದ ಓರ್ವ ಹೆಣ್ಣು ಮಗಳಿಗೋಸ್ಕರ, ಕನ್ನಡಿಗ, ದಲಿತ ಜಿಲ್ಲಾಧಿಕಾರಿಯನ್ನು ವರ್ಗಾವಣೆ ಮಾಡಲಾಗಿದೆ ಎಂದು ಸಾ. ರಾ. ಮಹೇಶ್ ದೂರಿದರು.
ಇದು ರಾಜ್ಯ ಸರ್ಕಾರದ ಅತಿದೊಡ್ಡ ಸಾಧನೆಯಾಗಿದೆ ಎಂದು ಸಾ.ರಾ.ಮಹೇಶ್ ವ್ಯಂಗ್ಯವಾಡಿದರು.