ಸಾಫ್ಟ್ ವೇರ್ ಇಂಜಿನಿಯರ್ ಸಾವಿಗೆ ಶರಣು

ಮೈಸೂರು: ಸಾಫ್ಟ್ ವೇರ್ ಇಂಜಿನಿಯರ್ ವೊಬ್ಬ ಬೈಕ್ ಕೊಡಿಸಲಿಲ್ಲವೆಂಬ ಕಾರಣಕ್ಕೆ ಸಾವಿಗೆ ಶರಣಾದ ಘಟನೆ ನಗರದ ಕುವೆಂಪುನಗರದಲ್ಲಿ ನಡೆದಿದೆ.

ಅಜಯ್ (25) ಸಾವನ್ನಪ್ಪಿದ ಸಾಫ್ಟ್ ವೇರ್ ಇಂಜಿನಿಯರ್.

ಮೃತ ಅಜಯ್‌ ಬೆಂಗಳೂರಿನ ಕಂಪನಿಯೊಂದರಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ. ಕಳೆದ ಕೆಲವು ತಿಂಗಳುಗಳಿಂದ ವರ್ಕ್ ಫ್ರಂ ಹೋಂ ಪಡೆದು ಮನೆಯಲ್ಲಿಯೇ ಕಾರ್ಯನಿರ್ವಹಿಸುತ್ತಿದ್ದ. ಈತ ತನ್ನ ತಂದೆ ತಾಯಿಯ ಜೊತೆ ರಾಯಲ್ ಎನ್ ಫೀಲ್ಡ್ ಬೈಕ್ ಖರೀದಿಸುವ ಪ್ರಸ್ತಾಪವಿರಿಸಿದ್ದ. ಆದರೆ ಪೋಷಕರು ಸದ್ಯಕ್ಕೆ ಬೇಡ ಎಂದು ಹೇಳಿದ್ದರು ಎನ್ನಲಾಗಿದೆ.

ಇದರಿಂದ ಮನನೊಂದ ಅಜಯ್ ತಂದೆ ತಾಯಿ ವಾಕಿಂಗ್ ಹೋದ ವೇಳೆ  ಬಾಗಿಲು ಹಾಕಿಕೊಂಡು ನೇಣಿಗೆ ಶರಣಾಗಿದ್ದಾನೆ.

ಈ ಬಗ್ಗೆ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.