ಹುಬ್ಬಳ್ಳಿ: ಸಂಪುಟ ವಿಸ್ತರಣೆ ಸಂದರ್ಭ ಅಸಮಾಧಾನ ಭುಗಿಲೇಳುವುದು ಸಹಜ ಎಂದು ಕೈಗಾರಿಕೆ ಸಚಿವ ಜಗದೀಶ ಶೆಟ್ಟರ್ ಹೇಳಿದ್ದಾರೆ.
ಶೆಟ್ಟರ್ ಅವರು ಗುರುವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ಸಚಿವ ಸಂಪುಟ ವಿಸ್ತರಣೆ ಹಿನ್ನೆಲೆ ಅಸಮಾಧಾನ ವಿಚಾರ ಕುರಿತು ಶೆಟ್ಟರ್ ಅವರು ಪ್ರತಿಕ್ರಿಯಿಸಿ ಸಂಪುಟ ವಿಸ್ತರಣೆ ಸಂದರ್ಭ ಅಸಮಾಧಾನಗಳು ಭುಗಿಲೇಳುವುದು ಸಹಜ ಎಂದರು.
ಸಂಚಿವ ಸಂಪುಟ ವಿಸ್ತರಣೆ ಮಾಡೋದು ಸಿಎಂ ಪರಮಾಧಿಕಾರ ಎಂದವರು ತಿಳಿಸಿದರು.
ಅಸಮಾಧಾನಗೊಂಡವರಿಗೆ ಪಕ್ಷದ ವರಿಷ್ಠರು ಸೂಕ್ತ ಸ್ಥಾನಮಾನ ನೀಡಲಿದ್ದಾರೆಂಭ ಭರವಸೆ ಇದೆ ಎಂದು ಜಗದೀಶ್ ಶೆಟ್ಟರ್ ಹೇಳಿದರು.
ಎಲ್ಲರನ್ನ ಸಮಾಧಾನಪಡಿಸುವ ಕೆಲಸವನ್ನು ಪಕ್ಷದ ವರಿಷ್ಠರು ಮಾಡಲಿದ್ದಾರೆಂದರು.
ಹೆಚ್. ವಿಶ್ವನಾಥ ಸಿಡಿ ಬಹಿರಂಗಪಡಿಸುವ ಹೇಳಿಕೆ ವಿಚಾರ ಕುರಿತು ಅವರು ಪ್ರತಿಕ್ರಿಯೆ ನೀಡಿ, ಪಕ್ಷದ ಆಂತರಿಕ ವಿಚಾರಗಳು ಏನೇ ಇದ್ದರೂ, ಅದನ್ನು ಪಕ್ಷದ ವರಿಷ್ಠರ ಜೊತೆ ಚರ್ಚೆ ಮಾಡಬೇಕು. ಬಹಿರಂಗವಾಗಿ ಹೇಳಿಕೆಗಳನ್ನು ನೀಡಬಾರದು ಎಂದು ಕಿವಿ ಮಾತು ಹೇಳಿದರು.