ಬೆಂಗಳೂರು: ರಸ್ತೆ, ಬಂದರು, ವಿಮಾನ ನಿಲ್ದಾಣಗಳ ನಿರ್ಮಾಣಕ್ಕೆ ಆದ್ಯತೆ ನೀಡಲಾಗಿದ್ದು, ಅಂತರಾಜ್ಯ ರಸ್ತೆಗಳನ್ನು ಖಾಸಗಿ-ಸಾರ್ವಜನಿಕ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.
77ನೇ ಸ್ವಾತಂತ್ರ್ಯದಿನಾಚರಣೆ ಅಂಗವಾಗಿ ಬೆಂಗಳೂರಿನ ಮಾಣಿಕ್ ಷಾ ಪೆರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿ
ರಾಜ್ಯದ ಜನತೆಗೆ ಶುಭಾಶಯ ಸಲ್ಲಿಸಿ ಜನರನ್ನುದ್ದೇಶಿಸಿ ಸಿಎಂ ಮಾತನಾಡಿದರು.
ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಿ, ಸಮಗ್ರ ಕರ್ನಾಟಕ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದು ಭರವಸೆ ನೀಡಿದರು.
ಅನೇಕ ಮಹನೀಯರು ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ ಬಲಿದಾನ ಮಾಡಿದ್ದಾರೆ ಅವರೆಲ್ಲರನ್ನೂ ನಾವು ಸದಾ ಸ್ಮರಿಸಬೇಕು ಎಂದು ತಿಳಿಸಿದರು.
ಕೃಷಿ, ತೋಟಗಾರಿಕೆ ಉತ್ತೇಜನಕ್ಕೆ ಸರ್ಕಾರ ಅನುದಾನ ನೀಡಲಿದೆ, ಕೌಶಲ್ಯಾಭಿವೃದ್ಧಿ ಯೋಜನೆ ಮೂಲಕ ಯುವಕರಿಗೆ ತರಬೇತಿ ನೀಡಲಾಗುವುದು.
ಕೈಗಾರಿಕೆ ಕ್ಷೇತ್ರದಲ್ಲಿ ಮತ್ತಷ್ಟು ಉತ್ತೇಜನ ನೀಡಲಾಗುವುದು. ಮೈಸೂರು, ಮಂಗಳೂರು, ಧಾರವಾಡ-ಹುಬ್ಬಳ್ಳಿ, ಬಳ್ಳಾರಿ ಮತ್ತು ಕಲಬುರಗಿ ಜಿಲ್ಲೆಯಲ್ಲಿ ಕೈಗಾರಿಗಳ ಸ್ಥಾಪನೆಗೆ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.
ಕೈಗಾರಿಕಾ ವಲಯಗಳ ನಡುವೆ ಸಂಪರ್ಕಿಸಲು ರಸ್ತೆ ನಿರ್ಮಾಣ ಮಾಡಲಾಗುವುದು ಕೈಗಾರಿಕೆಗಳ ಸ್ಥಾಪನೆ ಮೂಲಕ ಉದ್ಯೋಗ ಸೃಷ್ಟಿಗೂ ಕ್ರಮ ಕೈಗೊಳ್ಳಲಾಗಿದೆ ಎಂದು ಸರ್ಕಾರದ ಯೋಜನೆಗಳನ್ನು ತಿಳಿಸಿದರು.