ಸಂಜೆಯೊಳಗೆ 170 -180 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ -ಬಿ ಎಸ್ ವೈ

ಬೆಂಗಳೂರು: ಸಂಜೆಯೊಳಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದು ಮಾಜಿ ಮುಖ್ಯ ಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಯಡಿಯೂರಪ್ಪ, 170 ರಿಂದ 180 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ ಎಂದು ಸ್ಪಷ್ಟಪಡಿಸಿದರು.

ಪಟ್ಟಿ ಬಿಡುಗಡೆಗೂ ಮುನ್ನ ಮತ್ತೊಂದು ಸುತ್ತಿನ ಸಭೆ ನಡೆಸುತ್ತೇವೆ ಎಂದು ತಿಳಿಸಿದರು.

ಹಾಲಿ ಶಾಸಕರಿಗೆ ಟಿಕೆಟ್ ಸಿಗಲಿದೆಯೇ ಎಂಬ ಮಾಧ್ಯಮದವರ ಪ್ರಶ್ನೆಗೆ ಕೆಲವು ಹಾಲಿ ಶಾಸಕರಿಗೆ ಈ ಬಾರಿ ಟಿಕೆಟ್ ಕೈತಪ್ಪಲಿದೆ ಎಂದು ಉತ್ತರಿಸಿದರು.

ಅಂತಿಮ ಸುತ್ತಿನ ಸಭೆ ಬಳಿಕ ಪಟ್ಟಿ ಬಿಡುಗಡೆಯಾಗಲಿದೆ ಎಂದು ಯಡಿಯೂರಪ್ಪ ತಿಳಿಸಿದರು.