ಕೋವಿಡ್-19 ಎರಡನೇ ಅಲೆಯಿಂದಾಗಿ ದೇಶ- ರಾಜ್ಯದಲ್ಲಿ ತೀವ್ರಗೊಳ್ಳುತ್ತಿದ್ದು ಪರಿಸ್ಥಿತಿಯು ಮತ್ತಷ್ಟು ಬಿಗಡಾಯಿಸುತಿದೆ.
ಸರ್ಕಾರ ಅನೇಕ ಕಠಿಣ ಕ್ರಮಗಳನ್ನು ಕೈಗೊಂಡರು ಸಾರ್ವಜನಿಕರು ಅಸಹಕಾರ, ನಿರ್ಲಕ್ಷ್ಯ ದಿಂದಾಗಿ ವೇಗವಾಗಿ ಹಬ್ಬುತ್ತಿದೆ.
ಹೊಸ ಸೋಂಕಿತರ ಸಂಖ್ಯೆ ಸತತ ಏರುಗತಿಯಲ್ಲಿ ಇರುವ ಪರಿಣಾಮ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,20,95,855ಕ್ಕೆ ತಲುಪಿದೆ.
ಮಂಗಳವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ ದಾಖಲೆಯ 56,211 ಹೊಸ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ಇದು ಆತಂಕಕ್ಕೆ ಕಾರಣವಾಗಿದೆ, ಕಳೆದ ಜನವರಿ 16ರಿಂದ ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೊನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ಮೊದಲ ಆದ್ಯತೆಯಾಗಿ ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೊನಾ ವಾರಿಯರ್ಸ್‍ಗೆ ಲಸಿಕೆ ನೀಡಲಾಗಿತ್ತು. ಈಗ ಹಿರಿಯ ನಾಗರೀಕರಿಗೆ ಹಾಗೂ ದೀರ್ಘಕಾಲಿಕ ರೋಗದಿಂದ ಬಳಲುತ್ತಿರುವವರಿಗೂ ಲಸಿಕೆ ನೀಡಲಾಗುತ್ತಿದೆ.
ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 6,11,13,354 ಮಂದಿಗೆ ಲಸಿಕೆಯನ್ನು ನೀಡಲಾಗಿದೆ.
ಏಪ್ರಿಲ್ 1ರಿಂದ 45ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುತ್ತಿದೆ. ಇದರೆಲ್ಲಾದರ ನಡುವೆ ಕೊರೊನಾ 2ನೇ ಅಲೆಯು ಹರಡುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.
ಮಾಸ್ಕ್, ಸಾಮಾಜಿಕ ಅಂತರವಿಲ್ಲದೆ ಇರುವುದು ಜನರು ಕೋವಿಡ್ ಭಯವಿಲ್ಲದೆ ಈಗಲೂ ಹಬ್ಬ, ಜಾತ್ರೆ, ಮದುವೆ, ಸಮಾರಂಭ, ರಾಜಕೀಯ ಸಮಾವೇಶಗಳಲ್ಲಿ ಭಾಗವಹಿಸುತ್ತಿರುವುದು 2ನೇ ಅಲೆಯು ಹೆಚ್ಚಾಗಲು ಕಾರಣ.
ಮುಖ್ಯಮಂತ್ರಿ ಯವರು ಸೋಮವಾರ ಸಭೆ ನಡೆಸಿ ಮಾತನಾಡಿ ರಾಜ್ಯದಲ್ಲಿ ಯಾವುದೇ ಲಾಕ್ ಡೌನ್ ಇಲ್ಲ. ನೈಟ್ ಕಫ್ರ್ಯೂ ಸಹ ಜಾರಿಗೊಳಿಸುವುದಿಲ್ಲ. ಆದರೆ ಮಾ. 30ರಿಂದ 15 ದಿನ ಧಾರ್ಮಿಕ ಕಾರ್ಯಕ್ರಮ, ಜಾತ್ರೆ, ಪ್ರತಿಭಟನೆ, ಸತ್ಯಾಗ್ರಹಗಳಿಗೆ ಅವಕಾಶ ಇಲ್ಲ,
ಲಾಕ್ ಡೌನ್ ಬದಲಿಗೆ ರಾಜ್ಯದಲ್ಲಿ ಕೋವಿಡ್ ನಿಬರ್ಂಧಿಸಲು ಒಂದಷ್ಟು ಕಠಿಣ ನಿಯಮಗಳು ಜಾರಿಗೆ ತರಲಾಗುತ್ತಿದೆ ಎಂದಿದ್ದಾರೆ.
ಜನರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಮಾಸ್ಕ್ ಧರಿಸದಿದ್ದರೆ ದಂಡ ವಿಧಿಸಲಾಗುವುದು. ಅಪಾರ್ಟ್ ಮೆಂಟ್ ಗಳಲ್ಲಿ ಪಾರ್ಟಿ, ಜಿಮ್ ಮತ್ತು ಈಜುಕೋಳಗಳನ್ನು ನಿμÉೀಧಿಲಾಗಿದೆ ಎಂದು ಹೇಳಿದ್ದಾರೆ.
ಈ ಅಂಶಗಳು ಕಟ್ಟುನಿಟ್ಟಾಗಿ ಜಾರಿಗೆ ಬರಬೇಕಾಗಿದೆ. ಕಳೆದ ವರ್ಷದ ಲಾಕ್ ಡೌನ್ ನಿಂದಾಗಿ ಇಡೀ ದೇಶವೇ ಅರ್ಥಿಕ ಸಂಕಷ್ಟಕ್ಕೆ ಗುರಿಯಾಗಿದ್ದು ಕಣ್ಣಮುಂದೆನೇ ಇದೆ. ಮತ್ತೆ ಲಾಕ್ ಡೌನ್ ಜಾರಿಗೆ ಅದರೆ ಜನರ ಜೀವನ ಮಟ್ಟವು ಆಧೋಗತಿಗೆ ತಲುಪುತ್ತದೆ. ಸರ್ಕಾರಕ್ಕೆ ಮತ್ತೆ ಲಾಕ್ ಡೌನ್ ಜಾರಿಗೆ ತರುವ ಅನಿವಾರ್ಯತೆಯನ್ನು ಸೃಷ್ಟಿಸುವ ಸಂದರ್ಭ ಜನರು ತರದೇ ಇರುವ ಸಾಮಾಜಿಕ ಜವಾಬ್ದಾರಿ ಇದೆ. ಈ ನಿಟ್ಟಿನಲ್ಲಿ ಜನರು ಗಂಭೀರವಾಗಿ ಚಿಂತಿಸಿ, ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಮುಂತಾದ ನಿಯಮಗಳ ಮೂಲಕ ಕೋವಿಡ್ 2ನೇ ಅಲೆಯನ್ನು ದೂರವಿರಸಬೇಕಾಗಿದೆ.