ಬೆಂಗಳೂರು: ಆತುರದಲ್ಲಿ ಶಾಲೆಗಳ ಆರಂಭಿಸುವ ಚಿಂತನೆ ಸರಕಾರಕ್ಕೆ ಇಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ತಿಳಿಸಿದರು.
ನಗರದಲ್ಲಿ ಗುರುವಾರ ಸಚಿವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ಆತುರದಲ್ಲಿ ಶಾಲೆಗಳ ಆರಂಭಿಸುವ ಚಿಂತನೆ ಸರ್ಕಾರಕ್ಕಿಲ್ಲ. ಶಾಲೆ ಆರಂಭದ ಬಗ್ಗೆ ತಜ್ಞರ ಜತೆ ಸಭೆ ನಡೆಸಲಾಗುತ್ತದೆ ಎಂದರು.
ತಜ್ಞರು ವರದಿ ನೀಡಿದ ನಂತರ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಅವರು ಹೇಳಿದರು.
ಕೊರೊನಾ ರಾಜ್ಯದಲ್ಲಿ ದಿನೇ ದಿನೇ ಹೆಚ್ಚಾಗುತ್ತಿದ್ದು ಈ ಮಧ್ಯೆ ಶಾಲೆಗಳ ಆರಂಭ ಕುರಿತು ಭಾರಿ ಚರ್ಚೆಯಾಗುತ್ತಿದೆ. ಪೋಷಕರು ಮಕ್ಕಳನ್ನು ಗಮನದಲ್ಲಿರಿಸಿಕೊಂಡು ನಿಧಾ ಕೈಗೊಳ್ಳಲಾಗುವುದೆಂದರು.