ಹಾವೇರಿ: ರಾಜ್ಯ ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾದ ಬೆನ್ನಲ್ಲೆ ಅಸಮಾಧಾನ ಭುಗಿಲೆದ್ದಿದ್ದು ಟಿಕೆಟ್ ಕೈತಪ್ಪಿದ್ದಕ್ಕೆ ರಾಜೀನಾಮೆ ನೀಡಲು ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ನಿರ್ಧರಿಸಿದ್ದಾರೆ.
ಅವರ ಬೆನ್ನಲ್ಲೇ ವಿಧಾನಪರಿಷತ್ ಬಿಜೆಪಿ ಸದಸ್ಯ ಆರ್.ಶಂಕರ್ ಸಹ ಗುಡ್ ಬೈ ಹೇಳಲು ನಿರ್ಧರಿಸಿದ್ದಾರೆ.
ಹಾವೇರಿ ಜಿಲ್ಲೆ ರಾಣೇಬೆನ್ನೂರು ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿರುವ ಆರ್.ಶಂಕರ್ ಬಿಜೆಪಿಗೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ.
ಈ ಕುರಿತು ಮಾತಾನಾಡಿದ ಆರ್. ಶಂಕರ್, ಬಿಜೆಪಿಗೆ ನಾನು ರಾಜೀನಾಮೆ ನೀಡುತ್ತೇನೆ. ಮೊದಲು ಎಂಎಲ್ ಸಿ ಸ್ಥಾನಕ್ಕೆ ರಾಜೀನಾಮೆ ನೀಡುವೆ ಎಂದು ತಿಳಿಸಿದರು.
ಬಿಜೆಪಿ ಸರ್ಕಾರ ಬರಲು ನಾನೂ ಕಾರಣನಾಗಿದ್ದೆ. ಆದರೆ ಟಿಕೆಟ್ ಹಂಚಿಕೆ ವೇಳೆ ನನ್ನನ್ನ ಮರೆತುಬಿಟ್ಟರು.ನನ್ನ ತಾಳ್ಮೆಯ ಕಟ್ಟೆ ಒಡೆದಿದೆ. ಈ ಬಾರಿಯೂ ಪಕ್ಷೇತರನಾಗಿ ನಾನು ಸ್ಪರ್ಧಿಸುತ್ತೇನೆ ಎಂದು ಹೇಳಿದರು.