ಬೆಂಗಳೂರು: ಬಿಜೆಪಿ ಶಾಸಕ ಸತೀಶ್ ರೆಡ್ಡಿಯವರ ಎರಡು ಕಾರುಗಳಿಗೆ ಬೆಂಕಿ ಹಚ್ಚಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ನೇಪಾಳ ಮೂಲದ ಸಾಗರ್ ತಾಪ, ಶ್ರೀಧರ್ ಹಾಗೂ ನವೀನ್ ಬಂಧಿತ ಆರೋಪಿಗಳು.
ಘಟನೆ ನಡೆದ ಕೇವಲ 48 ಗಂಟೆಗಳಲ್ಲಿ ಪ್ರಕರಣದ ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಆಗ್ನೇಯ ವಿಭಾಗದ 5 ತಂಡ 123 ಸಿಸಿಟಿವಿ ಫುಟೇಜ್ ಪರಿಶೀಲನೆ ನಡೆಸಿ, ನಾಲ್ಕು ಆಯಾಮಗಳಲ್ಲಿ ತನಿಖೆ ಮಾಡಿ ಮೂವರು ಆರೋಪಿಗಳನ್ನು ಬಂಧಿಸಿದೆ.
ಆರೋಪಿಗಳಲ್ಲಿ ಇಬ್ಬರನ್ನು ಗಾರ್ವೇಬಾವಿಪಾಳ್ಯ ಬಳಿ ಬಂಧಿಸಿರುವ ಪೊಲೀಸರು ಮತ್ತೊಬ್ಬನನ್ನು ಬಂಡೇಪಾಳ್ಯದ ಸ್ಮಶಾನದಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ.
ಶಾಸಕ ಸತೀಶ್ ರೆಡ್ಡಿ ಈ ಭಾಗದಲ್ಲಿ ಶ್ರೀಮಂತ ಎಂಬ ಒಂದೇ ಕಾರಣಕ್ಕೆ ಈ ಕೃತ್ಯ ಎಸಗಿದ್ದಾಗಿ ಆರೋಪಿಗಳು ಪೊಲೀಸರ ತನಿಖೆ ವೇಳೆ ತಿಳಿಸಿದ್ದಾರೆ. ಶ್ರೀಮಂತರೇ ಶ್ರೀಮಂತರಾಗುತ್ತಾ ಇದ್ದಾರೆ, ಬಡವರು ಬಡವರಾಗಿಯೇ ಇದ್ದಾರೆ ಎಂದು ಆರೋಪಿಗಳು ಶಾಸಕ ಸತೀಶ್ ರೆಡ್ಡಿ ಅವರ ಕಾರಿಗೆ ಬೆಂಕಿ ಹಚ್ಚಿದ್ದಾರಂತೆ.