ಬೆಳಗಾವಿ: ಯೋಗಿ ಆದಿತ್ಯನಾಥ್ ಯೋಗಿನೋ ಆತ ರೋಗಿನೋ ಗೊತ್ತಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದರು.
ನಗರದಲ್ಲಿ ಸಿದ್ದರಾಮಯ್ಯ ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ಯೋಗಿ ಆದಿತ್ಯನಾಥ್ ಮುಖ್ಯಮಂತ್ರಿ ಆಗಿ ಮುಂದುವರೆಯಬಾರದು ಕೂಡಲೇ ಅವರು ರಾಜೀನಾಮೆ ನೀಡಲಿ ಎಂದು ಸಿದ್ದರಾಮಯ್ಯ ಹೇಳಿದರು.
ಯೋಗಿ ಆದಿತ್ಯನಾಥ್ ಕಾನೂನು ಸುವ್ಯವಸ್ಥೆ ಹಾಳು ಮಾಡಿದ್ದಾರೆ. ಜಂಗಲ್ ರಾಜ್ಯದಲ್ಲಿ ಕಾನೂನು ಇಲ್ಲ, ಪೆÇಲೀಸರು ಸರ್ವಾಧಿಕಾರಿ ರೀತಿಯಲ್ಲಿ ವರ್ತನೆ ಮಾಡುತ್ತಿದ್ದಾರೆಂದರು.
ಮುಖ್ಯಮಂತ್ರಿ ಸೂಚನೆಯಂತೆ ಪೆÇಲೀಸರು ರಾಹುಲ್ ಗಾಂದಿ ಅವರನ್ನು ತಡೆದ್ದಾರೆ ಎಂದು ಹೇಳಿದರು.
ಕರ್ನಾಟಕದಲ್ಲಿ ನೆರೆ ಸಂತ್ರಸ್ತರಿಗೆ ಮನೆ ಕಟ್ಟಿಕೊಟ್ಟಿಲ್ಲ, ದುಡ್ಡು ಕೊಟ್ಟಿಲ್ಲ. ಈ ಸಾರಿ ಪ್ರವಾಹ ಬಂದಾಗ ಒಂದೇ ಒಂದು ಪೈಸೆ ಖರ್ಚು ಮಾಡಿಲ್ಲ. ಕೋಟ್ಯಂತರ ರೂ. ಭ್ರಷ್ಟಾಚಾರ ನಡೆದಿದೆ ಎಂದು ಸಿದ್ದರಾಮಯ್ಯ ದೂರಿದರು.