ಸೂರಜ್ ರೇವಣ್ಣ ಬಂಧನ

ಹಾಸನ: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ವಿಧಾನ ಪರಿಷತ್ ಸದಸ್ಯ ಸೂರಜ್‌ ರೇವಣ್ಣರನ್ನು ಪೊಲೀಸರು ಬಂಧಿಸಿದ್ದಾರೆ.

ಶನಿವಾರ ಸಂತ್ರಸ್ತ ನೀಡಿದ್ದ ದೂರು ಆಧರಿಸಿ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 377 (ಅಸ್ವಾಭಾವಿಕ ಅಪರಾಧ), 342 (ತಪ್ಪಾದ ಬಂಧನಕ್ಕೆ ಶಿಕ್ಷೆ ) ಹಾಗೂ 506 (ಬೆದರಿಕೆ) ಅಡಿಯಲ್ಲಿ ಕೇಸ್‌ ದಾಖಲಾಗಿತ್ತು.

ಡಿಜಿಪಿ ಕಚೇರಿಯಲ್ಲಿ ದೂರು ನೀಡಿದ್ದ ಸಂತ್ರಸ್ತ ಹಾಸನ ಎಸ್‌ಪಿಗೂ ದೂರಿನ ಪ್ರತಿಯನ್ನು ಇ-ಮೇಲ್ ಮಾಡಿದ್ದ. ಮೇಲ್ ಆಧರಿಸಿ ಸಂತ್ರಸ್ತನನ್ನ ಕರೆಸಿ ಮಾಹಿತಿ ಪಡೆದ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದರು.

ಶನಿವಾರ ರಾತ್ರಿ ತನ್ನ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಹೊರಿಸಿದ್ದ ಸಂತ್ರಸ್ತನ ವಿರುದ್ಧ ಪ್ರತಿದೂರು ನೀಡಲು ಹಾಸನದ ಸೆನ್‌ ಪೊಲೀಸ್‌ ಠಾಣೆಗೆ ತೆರಳಿದ್ದರು.

ಅಲ್ಲಿಯೇ ಅವರನ್ನು ಬಂಧಿಸಿದ್ದ ಪೊಲೀಸರು ರಾತ್ರಿ ವಿಚಾರಣೆ ನಡೆಸಿದ್ದರು.

ಬಳಿಕ ಸೂರಜ್‌ ಜೊತೆಗೆ ನಿಗೂಢ ಸ್ಥಳಕ್ಕೆ ತೆರಳಿದ್ದ ಪೊಲೀಸರು ತಡರಾತ್ರಿ 1:30ರ ವರೆಗೂ ವಿಚಾರಣೆ ಮುಂದುವರಿಸಿದ್ದರು. ಪ್ರಕರಣದ ತನಿಖಾಧಿಕಾರಿ ಆಗಿರುವ ಸಕಲೇಶಪುರ ಡಿವೈಎಸ್‌ಪಿ ಪ್ರಮೋದ್‌ ಕುಮಾರ್‌ ಅವರು ಸೂರಜ್‌ ರೇವಣ್ಣ ಅವರನ್ನ ತೀವ್ರ ವಿಚಾರಣೆಗೆ ಒಳಪಡಿಸಿದ್ದರು.

ಭಾನುವಾರ ಬೆಳಿಗ್ಗೆ ಪೊಲೀಸರು ಸೂರಜ್ ರೇವಣ್ಣ ನನ್ನು ವೈದ್ಯಕೀಯ ಪರೀಕ್ಷೆಗೊಳ ಪಡಿಸಿದರು.