ಬೆಂಗಳೂರು: ನಾನು ಒಂದು ಕೋಟಿ ಮಕ್ಕಳ ಪೆÇೀಷಕ ಎಂದು ಶಿಕ್ಷಣ -ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಸಚಿವ ಸುರೇಶ್ ಕುಮಾರ್ ಅವರು ಶುಕ್ರವಾರ ಬರೆದುಕೊಂಡಿದ್ದಾರೆ.
ನಾನು ಈ ರಾಜ್ಯದ ಶಿಕ್ಷಣ ಸಚಿವ ಮಾತ್ರನಲ್ಲ. ಸುಮಾರು ಒಂದು ಕೋಟಿ ಮಕ್ಕಳ ಪೆÇೀಷಕ ಎಂಬುದರ ಅರಿವು ನನಗಿದೆ ಎಂದು ಸುರೇಶ್ ಕುಮಾರ್ ಬರೆದಿದ್ದಾರೆ.
ಯಾವುದೇ ಕಾರಣಕ್ಕೂ ಶಾಲೆಗಳನ್ನು ತೆರೆಯುವ ಧಾವಂತ ನಮ್ಮ ಸರ್ಕಾರಕ್ಕಾಗಲಿ ಅಥವಾ ಶಿಕ್ಷಣ ಇಲಾಖೆಗಾಗಲಿ ಖಂಡಿತ ಇಲ್ಲ ಎಂದಿದ್ದಾರೆ.
ನಮಗೆ ನಮ್ಮ ಮಕ್ಕಳ ಆರೋಗ್ಯ, ಸುರಕ್ಷತೆ ಅತ್ಯಂತ ಮುಖ್ಯ. ಅವುಗಳನ್ನು ಬಲಿಕೊಟ್ಟು ಯಾರೂ ಯಾವ ಕಾರ್ಯವನ್ನೂ ಪ್ರತಿಷ್ಟೆಗಾಗಿ ಮಾಡಬಾರದು. ಮಾಡುವುದಿಲ್ಲ ಎಂದವರು ತಿಳಿಸಿದ್ದಾರೆ.
ಶಾಲೆಗಳ ಬಗ್ಗೆ ರಾಜ್ಯದ ಎಲ್ಲಾ ಶಾಸಕರುಗಳ ಅಭಿಪ್ರಾಯವನ್ನು ಸುಮಾರು 9 ದಿವಸಗಳ ಹಿಂದೆ ನಾನು ಕೇಳಿದ್ದೆ. ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರಿಂದ ಹಿಡಿದು, ಅನೇಕ ಸಚಿವರು, ಶಾಸಕರು ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ.
ಅದೇ ರೀತಿ ಆರೋಗ್ಯ ಸಚಿವ ಶ್ರೀರಾಮುಲು ಸಹ ಈ ಕುರಿತು ಚರ್ಚೆ ನಡೆಸಿ ನನಗೆ ತಮ್ಮ ಅಭಿಪ್ರಾಯ ನೀಡುವುದಾಗಿ ತಿಳಿಸಿದ್ದಾರೆ. ಡಾ. ಸುಧಾಕರ್ ರವರೂ ನನಗೆ ಪತ್ರದ ಮೂಲಕ ಅಭಿಪ್ರಾಯ ತಿಳಿಸಿದ್ದಾರೆ.
ಆದರೆ ಅಭಿಪ್ರಾಯಗಳನ್ನು ಕೇಳಿದ ಮಾತ್ರಕ್ಕೆ ಸರ್ಕಾರ ಶಾಲೆಗಳನ್ನು ಆರಂಭ ಮಾಡುವ ನಿರ್ಧಾರವನ್ನು ಈಗಾಗಲೇ ಕೈಗೊಂಡೇ ಬಿಟ್ಟಿದೆ ಎಂಬರ್ಥದಲ್ಲಿ ವಿಪುಲವಾಗಿ ಚರ್ಚೆ ನಡೆಯುತ್ತಿರುವುದು ದುರದೃಷ್ಟಕರ. ಮತ್ತೆ ಮತ್ತೆ ಇದು ಮರುಕಳಿಸುತ್ತಲೇ ಇದೆ. ನಾನು ಬಾರಿ ಬಾರಿ ಸ್ಪಷ್ಟೀಕರಣ ಕೊಡುತ್ತಲೇ ಇದ್ದೇನೆ.
ಈಗಾಗಲೇ ಮುಖ್ಯಮಂತ್ರಿಗಳು ಸಹ ಈ ಕುರಿತು ಸರ್ಕಾರದ ನಿಲುವನ್ನು ಬಹಳ ಸ್ಪಷ್ಟವಾಗಿ ತಿಳಿಸಿದ್ದಾರೆ. ನಾನು ಮತ್ತೊಮ್ಮೆ, ಮಗದೊಮ್ಮೆ ಸ್ಪಷ್ಟಗೊಳಿಸುತ್ತಿದ್ದೇನೆ. ಶಾಲೆ ಪ್ರಾರಂಭ ಮಾಡುವ ಯಾವುದೇ ತರಾತುರಿ ನಮ್ಮ ಮುಂದೆ ಇಲ್ಲ.
ಎಲ್ಲ ಮಾಧ್ಯಮಗಳಲ್ಲಿ ನನ್ನದೊಂದು ಮನವಿ. ಶಿಕ್ಷಣ ಇಲಾಖೆಯ ಮುಂದಿನ ತೀರ್ಮಾನವನ್ನು ಮಕ್ಕಳ ಹಿತವನ್ನು ಆದ್ಯತೆಯಲ್ಲಿಟ್ಟುಕೊಂಡು ಎಲ್ಲರೊಡನೆ ಸಮಾಲೋಚನೆಯ ನಂತರ ಕೈಗೊಳ್ಳಲಾಗುತ್ತದೆಯೇ ಹೊರತು ಯಾವುದನ್ನೂ ಡಿಢೀರನೆ ಘೋಷಿಸುವುದಿಲ್ಲ. ಯಾವುದೇ ಪೆÇೀಷಕರ ಮನಸ್ಸಿನಲ್ಲಿ ಈ ಕುರಿತು ಕಿಂಚಿತ್ ಸಹ ಗೊಂದಲ ಬೇಡ ಎಂದು ಕಳಕಳಿಯಿಂದ ತಿಳಿಸುತ್ತಿದ್ದೇನೆ ಎಂದಿದ್ದಾರೆ.