ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವಿರುದ್ಧ ದೂರು ಕೊಟ್ಟ ಮಹಿಳೆ ಮಾನಸಿಕ ಅಸ್ವಸ್ಥೆ ಎನ್ನುತ್ತಿದ್ದಾರೆ ಆದ್ದರಂದ ಈಗಲೇ ಏನೂ ಹೇಳಲಾಗದು ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ.
ಒಟ್ಟಿನಲ್ಲಿ ಪ್ರಕರಣದ ಕುರಿತು ತನಿಖೆ ಆಗುವವರೆಗೂ ಯಾವುದೇ ವಿಷಯ ತಿಳಿಸೋಕೆ ಆಗುವುದಿಲ್ಲ ಎಂದು ಮಾದ್ಯಮದವರಿಗೆ ಗೃಹಸಚಿವರು ತಿಳಿಸಿದರು
ಗುರುವಾರ ರಾತ್ರಿ ಒಬ್ಬ ಮಹಿಳೆ ದೂರು ಕೊಟ್ಟಿದ್ದಾರೆ. ಅದನ್ನು ಪರಿಶೀಲಿಸಿ ಕೇಸ್ ರಿಜಿಸ್ಟರ್ ಮಾಡಿದ್ದಾರೆ. ಪೊಲೀಸರು ಅದರ ಬಗ್ಗೆ ತನಿಖೆ ಮಾಡುತ್ತಿದ್ದಾರೆ. ತನಿಖೆ ಆಗುವವರೆಗೂ ಯಾವುದೇ ವಿಷಯ ತಿಳಿಸೋಕೆ ಆಗಲ್ಲ. ಇದು ಒಬ್ಬ ಮಾಜಿ ಸಿಎಂ ವಿಷಯಕ್ಕೆ ಸಂಬಂಧಿಸಿದ್ದು, ಇದು ಬಹಳ ಸೂಕ್ಷ್ಮ ವಿಷಯ ಎಂದರು.
ಯಡಿಯೂರಪ್ಪ ಒಬ್ಬ ಹಿರಿಯ ರಾಜಕಾರಣಿ. ಇದರಲ್ಲಿ ಯಾವುದೇ ರಾಜಕೀಯ ದುರುದ್ದೇಶ ಇಲ್ಲ. ಅವರು ಯಾರೋ ಮಹಿಳೆ ದೂರು ಕೊಟ್ಟಿದ್ದಾರೆ. ಕಾನೂನು ಪ್ರಕಾರ ಪೊಲೀಸರು ತನಿಖೆ ಮಾಡ್ತಿದ್ದಾರೆ. ಇದರ ಬಗ್ಗೆ ಡಿಸಿಎಂ, ಸಿಎಂ ಜೊತೆಗೂ ಚರ್ಚೆ ಮಾಡಿದ್ದೇವೆ. ಮುಖ್ಯಮಂತ್ರಿಗಳು ಕೂಡ ಇದರ ಬಗ್ಗೆ ಮಾಹಿತಿ ಪಡೆದಿದ್ದಾರೆ ಎಂದು ತಿಳಿಸಿದರು.
ಆ ಮಹಿಳೆ ಮಾನಸಿಕ ಅಸ್ವಸ್ಥರು ಅಂತಾರೆ ಆದರೆ ಅವರು ದೂರನ್ನು ಟೈಪ್ ಮಾಡಿ ಕೊಟ್ಟಿದ್ದಾರೆ, ಕೈಯಿಂದ ಬರೆದು ದೂರು ಕೊಟ್ಟಿದ್ದಲ್ಲ,ಟೈಪ್ ಕಾಫಿ ಕೊಟ್ಟಿದ್ದಾರೆ ಎಂದು ಅಧಿಕಾರಿಗಳು ನನಗೆ ಹೇಳಿದ್ದಾರೆ.
ಇದು ಒಬ್ಬ ಮಾಜಿ ಸಿಎಂ ವಿಷಯಕ್ಕೆ ಸೇರಿದ್ದಂತದ್ದು ಹಾಗಾಗಿ ಯಾವುದೇ ವಿಷಯ ವಾದರೂ ಬಹಳ ಎಚ್ಚರಿಕೆಯಿಂದ ಹೇಳಬೇಕಾಗುತ್ತದೆ ಎಂದು ಪರಮೇಶ್ವರ್ ತಿಳಿಸಿದರು.