ಉಡುಪಿ: ಖಾಸಗಿ ಕಾಲೇಜೊಂದರಲ್ಲಿ ಮೂವರು ವಿದ್ಯಾರ್ಥಿನಿಯರು, ಶೌಚಾಲಯದಲ್ಲಿ ಮೊಬೈಲ್ ಕ್ಯಾಮೆರಾ ಇರಿಸಿ ವಿದ್ಯಾರ್ಥಿನಿಯರ ಖಾಸಗಿ ವೀಡಿಯೋಗಳನ್ನು ಚಿತ್ರೀಕರಿಸಿರುವ ಘಟನೆ ಸಂಬಂಧ, ಕಾಲೇಜು ಆಡಳಿತ ಮಂಡಳಿ ಮತ್ತು ವಿದ್ಯಾರ್ಥಿನಿಯರ ವಿರುದ್ಧ ಪೊಲೀಸರು ಎಫ್‍ಐಆರ್ ದಾಖಲಿಸಿಕೊಂಡಿದ್ದಾರೆ.
ವೀಡಿಯೋ ಮಾಡಿದ ಮುಸ್ಲಿಂ ಸಮುದಾಯದ ಮೂವರು ವಿದ್ಯಾರ್ಥಿಗಳಾದ ಅಲಿಮತುಲ್ ಶೈಫಾ, ಶಬಾನಾಜ್ ಮತ್ತು ಆಲಿಯಾ ವಿರುದ್ಧ ಹಾಗೂ ನೇತ್ರಜ್ಯೋತಿ ಆಡಳಿತ ಮಂಡಳಿಯ ವಿರುದ್ಧ ಸಾಕ್ಷ್ಯನಾಶ ಆರೋಪದಡಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.
ಹಲವು ಹಿಂದೂ ಸಂಘಟನೆಗಳು, ಮಹಿಳೆಯರಿಂದ ಭಾರಿ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ ಪ್ರಕರಣವನ್ನು ದಾಖಲಿಸಿಕೊಂಡಿರುವ ಪೊಲೀಸರು ವಿಚಾರಣೆ ಆರಂಭಿಸಲಿದ್ದಾರೆ.
ಪೊಲೀಸರ ವರ್ತನೆ ವಿರುದ್ದ ಸಾಮಾಜಿಕ ಜಾಲತಾಣ ಹಾಗೂ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶ ವ್ಯಕ್ತವಾದ ನಂತರಪೊಲೀಸರು ಎಚ್ಚೆತ್ತುಕೊಂಡಿದ್ದಾರೆ.
ಉಡುಪಿ ಜಿಲ್ಲೆಯ ಮಲ್ಪೆ ಠಾಣೆಯಲ್ಲಿ ಅಮಾನತುಗೊಂಡ ಮೂವರು ವಿದ್ಯಾರ್ಥಿನಿಯರು ಹಾಗೂ ಕಾಲೇಜು ಆಡಳಿತ ಮಂಡಳಿ ವಿರುದ್ದ ಎಫ್‍ಐಆರ್ ದಾಖಲಾಗಿದೆ
ಆರೋಪಿಗಳ ವಿರುದ್ದ ಸೂಕ್ತ ಕ್ರಮ ತೆಗೆದುಕೊಳ್ಳದಿದ್ದರೆ, ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ದೂರು ನೀಡುವುದಾಗಿ ಸಂತ್ರಸ್ಥೆಯ ಪೋಷಕರು ಹೇಳಿದ್ದರು.
ಜತೆಗೆ ಪ್ರತಿಪಕ್ಷ ಬಿಜೆಪಿ ಹಾಗೂ ಹಿಂದೂಪರ ಸಂಘಟನೆಗಳು ದೂರು ದಾಖಲಿಸದ ಪೊಲೀಸರ ಕ್ರಮಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು.
ಪ್ರಕರಣ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಮಲ್ಪೆ ಪೊಲೀಸರು ಅಮಾನತುಗೊಂಡಿದ್ದ ಮೂವರು ವಿದ್ಯಾರ್ಥಿನಿಯರು ಹಾಗೂ ಕಾಲೇಜು ಆಡಳಿತ ಮಂಡಳಿ ವಿರುದ್ದ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕಾಲೇಜು ಆಡಳಿತ ಮಂಡಳಿ ಆ ಮೂವರು ವಿದ್ಯಾರ್ಥಿನಿಯರನ್ನು ಅಮಾನತುಗೊಳಿಸಿ ಪೊಲೀಸರಿಗೆ ದೂರು ನೀಡದೇ ಇತ್ಯರ್ಥಗೊಳಿಸಲು ಮುಂದಾಗಿತ್ತು. ಆದರೆ ಈ ಬಗ್ಗೆ ಧ್ವನಿ ಎತ್ತಲು ಮುಂದಾಗಿದ್ದ ಯುವತಿಯೊಬ್ಬರಿಗೆ ಪೊಲೀಸರು ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿತ್ತು.