ಬೆಂಗಳೂರು: ಉಡುಪಿಯಲ್ಲಿ ಭಾರಿ ಮಳೆಯಾಗುತ್ತಿದ್ದು, ರಕ್ಷಣಾ ಕಾರ್ಯಾಚರಣೆಗೆ ತಂಡವನ್ನು ಕಳುಹಿಸಲಾಗಿದೆ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಈ ಕುರಿತು ಗೃಹ ಸಚಿವರು ಟ್ವೀಟ್ ಮಾಡಿ, ಕಳೆದೆರಡು ದಿನಗಳಿಂದ ಉಡುಪಿಯಾದ್ಯಂತ ನಿರಂತರವಾಗಿ ಮಳೆ ಸುರಿಯುತ್ತಿದೆ. ರಕ್ಷಣಾ ಕಾರ್ಯಾಚರಣೆಗೆ 250 ಜನರ ತಂಡವನ್ನು ಕಳುಹಿಸಲಾಗಿದ್ದು, ರಕ್ಷಣಾ ಹೆಲಿಕಾಪ್ಟರ್ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಮಳೆಯಿಂದ ಪ್ರವಾಹ ಪರಿಸ್ಥಿತಿ ಉಂಟಾಗಿ ಕೆಲವು ಗ್ರಾಮಗಳು ಜಲಾವೃತಗೊಂಡಿದೆ. ರಸ್ತೆ ಸಂಪರ್ಕ ಕೆಲವೆಡೆ ಕಡಿತವಾಗಿದೆ. ಜಿಲ್ಲಾಡಳಿತ ತಂದ ತಕ್ಷಣ 250 ಸದಸ್ಯರನ್ನು ಒಳಗೊಂಡ ರಕ್ಷಣಾ ತಂಡವನ್ನು ರಾತ್ರಿಯೇ ಕಳುಹಿಸಲಾಗಿದೆ ಎಂದು ಟ್ವೀಟ್ ನಲ್ಲಿ ಗೃಹ ಸಚಿವರು ತಿಳಿಸಿದ್ದಾರೆ.