ಚಿಕ್ಕಮಗಳೂರು: ಜೆಡಿಎಸ್ ಮುಖಂಡ, ವಿಧಾನಪರಿಷತ್ ಉಪಸಭಾಪತಿ ಎಸ್.ಎಲ್. ಧರ್ಮೇಗೌಡ (65) ರೈಲಿಗೆ ತಲೆಕೊಟ್ಟು ಸಾವಿಗೆ ಶರಣಾಗಿದ್ದಾರೆ.
ಕಡೂರು ತಾಲೂಕಿನ ಗುಣಸಾಗರದ ಬಳಿಯ ಮಂಕೇನಹಳ್ಳಿ ರೈಲ್ವೆ ಟ್ರ್ಯಾಕ್ ಬಳಿ ಈ ಘಟನೆ ನಡೆದಿದೆ.
ಸೋಮವಾರ ಸಂಜೆ ಮನೆಯಿಂದ ಡ್ರೈವರ್ ಜೊತೆ ಸ್ಯಾಂಟ್ರೋ ಕಾರಿನಲ್ಲಿ ಹೊರಟ ಧರ್ಮೇಗೌಡ ನಂತರ ದೂರವಾಣಿ ಕರೆ ಬಂದ ಹಿನ್ನೆಲೆಯಲ್ಲಿ ಮಾತನಾಡುತ್ತಾ ಡ್ರೈವರ್ ನನ್ನ ನೀನು ಹೋಗು ನಾನು ಸ್ವಲ್ಪ ಮಾತನಾಡುವುದಿದೆ ಎಂದು ಹಳಿ ಕಳುಹಿಸಿದ್ದಾರೆಂತೆ.
ನಂತರ ತಡರಾತ್ರಿಯಾದರೂ ಮನೆಗೆ ಬಾರದೆ ಇದ್ದಾಗ ಧರ್ಮೇಗೌಡರಿಗೆ ಫೆÇೀನ್ ಮಾಡಿದ್ದಾರೆ ಆದರೆ ಯಾವುದೇ ಪ್ರತಿಕ್ರಿಯೆ ನೀಡದೆ ಇದ್ದಾಗ ರಾತ್ರಿಯೆಲ್ಲಾ ಹುಡುಕಾಟ ನಡೆಸಿದ್ದು 2 ಗಂಟೆ ವೇಳೆಗೆ ರೈಲ್ವೆ ಹಳಿ ಬಳಿ ಮೃತದೇಹ ಪತ್ತೆಯಾಗಿದೆ.
ವಿಷಯ ತಿಳಿದು, ಶಾಸಕ ಸಿ.ಟಿ. ರವಿ, ಕಡೂರು ಶಾಸಕ ಬೆಳ್ಳಿ ಪ್ರಕಾಶ್ ಸ್ಥಳಕ್ಕೆ ಭೇಟಿ ನೀಡಿದರು.
ಈ ವೇಳೆ ಮಾತನಾಡಿದ ಸಿ. ಓ. ರವಿ, ಯಾವಾಗಲೂ ತಮಾಷೆ ಮಾಡಿಕೊಂಡಿರುತ್ತಿದ್ದ ವ್ಯಕ್ತಿ ಇಂತಹ ನಿರ್ಧಾರ ತೆಗೆದುಕೊಂಡಿದ್ದಾರೆ ಎಂಬುದು ಆಶ್ಚರ್ಯ ಎಂದರು.
ಸೋಮವಾರ ಅವರ ಜೊತೆ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಿ ಲವಲವಿಕೆಯಿಂದ ಇದ್ದರು. ಅವರ ಆತ್ಮಕ್ಕೆ ಶಾಂತಿ ಸಿಗಲಿ ಅವರ ಕುಟುಂಬ ವರ್ಗಕ್ಕೆ ದುಃಖ ಭರಿಸುವ ಶಕ್ತಿ ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದರು.