ಬೆಳಗಾವಿ:ಉತ್ತರ ಕರ್ನಾಟಕದ ಅಭಿವೃದ್ಧಿಗೆ ಈಗಿನ ಅಧಿವೇಶನದಲ್ಲೇ ನಿಣರ್ಯಗಳನ್ನು ತೆಗೆದುಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ಸೋಮವಾರದಿಂದ ಪ್ರಾರಂಭವಾಗಿರುವ ವಿಧಾನ ಮಂಡಲ ಅಧಿವೇಶನದಲ್ಲಿ ಪಾಲ್ಗೊಳ್ಳುವ ಮುನ್ನ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆಮಾತನಾಡಿದರು.
ಉತ್ತರ ಕರ್ನಾಟಕದ ಅಭಿವೃದ್ಧಿಗೆ ಸರ್ಕಾರ ಸಿದ್ದವಿದ್ದು, ಹಲವು ಯೋಜನೆಗಳನ್ನು ಜಾರಿಗೆ ತರಲು ಕ್ರಮ ಕೈಗೊಳ್ಳುತ್ತೇನೆ ಎಂದರು.
ಅಧಿವೇಶನದಲ್ಲಿ ಸರ್ಕಾರ ಕೆಲವು ವಿಧೇಯಕಗಳನ್ನು ಮಂಡಿಸಲಿದೆ. ಹಾಗೆಯೇ ಉತ್ತರ ಕರ್ನಾಟಕದ ಅಭಿವೃದ್ದಿ ಕುರಿತ ಯೋಜನೆಗಳ ಬಗ್ಗೆಯೂ ಚರ್ಚೆ ಮಾಡಲು ಸಿದ್ದವಿದೆ ಎಂದು ಹೇಳಿದರು.
ಮತಾಂತರ ನಿಷೇಧ ಕಾಯ್ದೆ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚಿಸಿದ ಬಳಿಕ ಸದನದಲ್ಲಿ ಮಂಡಿಸಲಾಗುವುದು ಎಂದರು.
ಲವ್ ಜಿಹಾದ್ ಕಾಯ್ದೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಕಾಯ್ದೆಗಳ ಪರಿಶೀಲನಾ ಸಮಿತಿ ಮುಂದೆ ಯಾವ ಯಾವ ಕಾಯ್ದೆಗಳು ಬರುತ್ತವೋ ನೋಡೋಣ. ಆನಂತರ ಸದನದಲ್ಲಿ ಅವುಗಳನ್ನು ಮಂಡಿಸುವ ಬಗ್ಗೆ ತೀರ್ಮಾನ ಮಾಡುತ್ತೇವೆ ಎಂದು ಹೇಳಿದರು.
ರೈತರ ವಿರೋಧ ವ್ಯಕ್ತವಾಗಿರುವ ಕೃಷಿ ಕಾಯ್ದೆಗಳನ್ನು ವಾಪಸ್ ತೆಗೆದುಕೊಳ್ಳುವ ಬಗ್ಗೆ ಕೇಳಲಾದ ಪ್ರಶ್ನೆಗೆ, ರೈತರು ಯಾವ ವಿಚಾರವನ್ನು ಪ್ರಸ್ತಾಪಿಸುತ್ತಾರೋ ಎಂಬುದನ್ನು ತಿಳಿದು ಆನಂತರ ತೀರ್ಮಾನಿಸುತ್ತೇವೆ ಎಂದು ಬೊಮ್ಮಾಯಿ ತಿಳಿಸಿದರು.