ದೊಡ್ಡಬಳ್ಳಾಪುರ: ವರುಣಾದಲ್ಲಿ ಬಿ.ವೈ. ವಿಜಯೇಂದ್ರ ಸ್ಪರ್ಧಿಸಬೇಕು ಎಂಬುದು ಜನರ ಬೇಡಿಕೆ, ಈ ಬಗ್ಗೆ ಸಂಸದೀಯ ಮಂಡಳಿ ಹಾಗೂ ಬಿ.ಎಸ್. ಯಡಿಯೂರಪ್ಪ ಅಂತಿಮ ತೀರ್ಮಾನ ಮಾಡುತ್ತಾರೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಈ ಕುರಿತು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ಸಿಎಂ, ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ವಿರುದ್ದ ನಾವು ಪೈಪೋಟಿ ಕೊಡುತ್ತೇವೆ ಎಂದು ಹೇಳಿದರು.
ಬರೆದಿಟ್ಟುಕೊಳ್ಳಿ ನೂರಕ್ಕೆ ನೂರು ನಾವೇ ಅಧಿಕಾರಕ್ಕೆ ಬರುತ್ತೇವೆ ಈ ಮಾತನ್ನ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಸನ್ನಿಧಿಯಲ್ಲಿ ಹೇಳುತ್ತಿದ್ದೇನೆ. ಸ್ಪಷ್ಟ ಬಹುಮತದಿಂದ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ದೃಢ ವಿಶ್ವಾಸದಿಂದ ತಿಳಿಸಿದರು.
ಸಮೀಕ್ಷೆ ನಡೆಯುತ್ತಿವೆ. ಇನ್ನೂ ಒಂದುವರೆ ತಿಂಗಳು ಸಮಯವಿದೆ.ಎಲ್ಲಾ ಸಮೀಕ್ಷೆಗಳು ಕಾಂಗ್ರೆಸ್ ಪರವಾಗಿಯೇನೂ ಇಲ್ಲ ಎಂದು ಬೊಮ್ಮಾಯಿ ತಿಳಿಸಿದರು.