ವಿದ್ಯಾರ್ಥಿಗಳಿಗೆ ಮಾದಕವಸ್ತು ಮಾರಾಟ ಮಾಡುತ್ತಿದ್ದ ಇಬ್ಬರು ಪೆಡ್ಲರ್ ಗಳ ಬಂಧನ

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ವಿದ್ಯಾರ್ಥಿಗಳನ್ನು ಟಾರ್ಗೆಟ್ ಮಾಡಿಕೊಂಡು ಹೆರಾಯಿನ್, ಅಫೀಮು ಮತ್ತಿತರ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಬೆಂಗಳೂರು ಮೂಲದ ಇಬ್ಬರು ದಂಧೆಕೋರರನ್ನು ಮಂಡ್ಯ ಪೆÇಲೀಸರು ಬಂಧಿಸಿದ್ದಾರೆ.

ಬಂಧಿತರಿಂದ 6 ಲಕ್ಷ ಮೌಲ್ಯದ ಹೆರಾಯಿನ್, 75 ಸಾವಿರ ಮೌಲ್ಯದ ಅಫೀಮನ್ನು ವಶಕ್ಕೆ ಪಡೆಯಲಾಗಿದೆ.

ಬೆಂಗಳೂರಿನಲ್ಲಿ ಡ್ರಗ್ಸ್ ಪ್ರಕರಣ ಹೆಚ್ಚಾಗಿರುವುದರಿಂದ ಅಲ್ಲಿ ಪೆÇಲೀಸರು ಫುಲ್ ಅಲರ್ಟ್ ಆಗಿದ್ದಾರೆ. ಹಾಗಾಗಿ ಪಕ್ಕದ ಮಂಡ್ಯ ಜಿಲ್ಲೆಯತ್ತ ಮಾದಕವಸ್ತುಗಳ ದಂಧೆಕೋರರು ಮುಖ ಮಾಡಿದ್ದಾರೆ.

ದಂಧೆಕೋರರು ವಿದ್ಯಾರ್ಥಿಗಳನ್ನು ಟಾರ್ಗೆಟ್ ಮಾಡಿಕೊಂಡು ಹೆರಾಯಿನ್, ಅಫೀಮು ಮತ್ತಿತರ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದಾರೆ.

ಇದರಿಂದ ಯುವ ಪೀಳಿಗೆ ಮಾದಕವಸ್ತುಗಳ ವ್ಯಸನಿಗಳಾಗುತ್ತಿದ್ದು ಈ ಬಗ್ಗೆ ಸಾರ್ವಜನಿಕರಿಂದ ಎಸ್ ಪಿ ಕಚೇರಿಗೆ ಹಾಗೂ ಪೆÇಲೀಸ್ ಠಾಣೆಗಳಿಗೆ ಪದೇ ಪದೇ ದೂರುಗಳು ಬಂದಿವೆ.

ಈ ಹಿನ್ನೆಲೆಯಲ್ಲಿ ಮಂಡ್ಯ ಪೆÇಲೀಸರು ದಂಧೆಕೋರರನ್ನು ಬಂಧಿಸಲು ಬಲೆ ಬೀಸಿದ್ದರು.

ಇತ್ತೀಚೆಗೆ ಮಂಡ್ಯದ ಚರ್ಚ್ ರಸ್ತೆ ಬಳಿ ಇಬ್ಬರು ವ್ಯಕ್ತಿಗಳು ಅನುಮಾನಾಸ್ಪದವಾಗಿ ಓಡಾಡುತ್ತಿದ್ದನ್ನು ಗಮನಿಸಿದ ಪೆÇಲೀಸರು ಅವರನ್ನು ಠಾಣೆಗೆ ಕರೆತಂದು ವಿಚಾರಣೆ ನಡೆಸಿದಾಗ ಇಬ್ಬರೂ ಹೆರಾಯಿನ್ ಹಾಗೂ ಅಫೀಮು ಪೆಡ್ಲರ್ ಗಳು ಎಂದು ಗೊತ್ತಾಗಿದೆ.

ಅವರನ್ನು ತೀವ್ರ ವಿಚಾರಣೆಗೊಳಪಡಿಸಿದಾಗ, ವಿದ್ಯಾರ್ಥಿಗಳನ್ನು ಟಾರ್ಗೆಟ್ ಮಾಡಿಕೊಂಡು ಹೆರಾಯಿನ್ ಹಾಗೂ ಅಫೀಮು ಮಾರಾಟ ಮಾಡುತ್ತಿದ್ದೆವೆಂದು ಆರೋಪಿಗಳು ಬಾಯಿ ಬಿಟ್ಟಿದ್ದಾರೆ.

ಜಿಲ್ಲೆಯಲ್ಲಿ ಮಾದಕವಸ್ತುಗಳ ಮಾರಾಟಗಾರರು ಇನ್ನಷ್ಟು ಮಂದಿ ಇರಬಹುದು ಎಂಬ ಶಂಕೆಯನ್ನು ಪೆÇಲೀಸರು ವ್ಯಕ್ತಪಡಿಸಿದ್ದು, ಅವರ ಬಂಧನಕ್ಕೆ ಮುಂದಾಗಿದ್ದಾರೆ.