ಪ್ರಜ್ಞಾವಂತ ಮತದಾರರು ಬಿಜೆಪಿ ಬೆಂಬಲಿಸಲಿದ್ದಾರೆ – ಡಾ.ಕೆ.ಸುಧಾಕರ್

ಬೆಂಗಳೂರು: ಶಿಕ್ಷಕ ಮತ್ತು ಪದವೀಧರ ಕ್ಷೇತ್ರಗಳ ಪ್ರಬುದ್ಧ ಮತದಾರರು ಬಿಜೆಪಿ ಅಭ್ಯರ್ಥಿಗಳನ್ನು ಬೆಂಬಲಿಸಲಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.
ವಿಧಾನಪರಿಷತ್ ಆಗ್ನೇಯ ಶಿಕ್ಷಕ ಹಾಗೂ ಪದವೀಧರ ಕ್ಷೇತ್ರದ ಚುನಾವಣೆಯ ಬಿಜೆಪಿ ಅಭ್ಯರ್ಥಿಗಳಾದ ಪುಟ್ಟಣ್ಣ ಮತ್ತು ಚಿದಾನಂದಗೌಡ ಅವರ ನಾಮಪತ್ರ ಸಲ್ಲಿಕೆ ನಂತರÀ ಸಚಿವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ನಾಲ್ವರು ಅಭ್ಯರ್ಥಿಗಳಿಗೆ ಗೆಲವು ನಿಶ್ಚಿತ ಎಂದು ಸುಧಾಕರ್ ತಿಳಿಸಿದರು.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ, ಸಮರ್ಥ ಆಡಳಿತದ ಮೂಲಕ ಪದವೀಧರ ಮತ್ತು ಶಿಕ್ಷಕ ಸಮುದಾಯದ ಮನ ಗೆದ್ದಿದೆ. ಈ ಹಿನ್ನೆಲೆಯಲ್ಲಿ ಪಕ್ಷದ ಎಲ್ಲ ನಾಲ್ವರು ಅಭ್ಯರ್ಥಿಗಳಿಗೆ ಗೆಲವು ನಿಶ್ಚಿತ ಎಂದರು.
ವಿಧಾನಪರಿಷತ್ತು ಶಕ್ತಿಶಾಲಿ ಆಗಬೇಕು ಎಂದಾದರೆ, ಪುಟ್ಟಣ್ಣ ಮತ್ತು ಚಿದಾನಂದಗೌಡರಂತಹ ಅಭ್ಯರ್ಥಿಗಳು ಆಯ್ಕೆಯಾಗಬೇಕು. ಪಕ್ಷದ ಪರವಾದ ವಾತಾವರಣ ಎಲ್ಲೆಡೆ ಕಂಡುಬರುತ್ತಿದೆ. ಹೀಗಾಗಿ ಗೆಲವು ನಮ್ಮದೇ ಎಂದು ಡಾ|| ಸುಧಾಕರ್ ವಿಶ್ವಾಸ ವ್ಯಕ್ತಪಡಿಸಿದರು.
ನಾಮಪತ್ರ ಸಲ್ಲಿಕೆ ವೇಳೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಶಾಸಕರಾದ ಎಂ.ಪಿ. ನಾರಾಯಣ ಸ್ವಾಮಿ, ತಿಪ್ಪಾರೆಡ್ಡಿ, ಜ್ಯೋತಿ ಗಣೇಶ್, ವಿಧಾನಪರಿಷತ್ ಸದಸ್ಯ ರವಿಕುಮಾರ್ ಉಪಸ್ಥಿತರಿದ್ದರು.