ಹಾಸನ: ಅಪರಿಚಿತ ಮಹಿಳೆಯ ಕೊಂದು ಆಕೆ ಮೇಲೆ ಅತ್ಯಾಚಾರವೆಸಗಿರುವ ವಿಕೃತ ಘಟನೆ ಹಾಸನದಲ್ಲಿ ನಡೆದಿದೆ.
ನಗರದ ಸುಭಾಷ್ ವೃತ್ತದ ಸಮೀಪ ಕನಿಕಾಪರಮೇಶ್ವರಿ ಬ್ಯಾಂಕ್ ಬಳಿ ರಾತ್ರಿ ಮಲಗಿದ್ದ ಸುಮಾರು 45 ವರ್ಷದ ನಿರ್ಗತಿಕ ಮಹಿಳೆಯೊಂದಿಗೆ ಯುವಕನೊಬ್ಬ ಲೈಂಗಿಕ ದೌರ್ಜನ್ಯವೆಸಗಲು ಯತ್ನಿಸಿದ್ದಾನೆ.
ಆದರೆ ಆಕೆ ಅದಕ್ಕೆ ಒಪ್ಪಲಿಲ್ಲ.
ಮಹಿಳೆ ಮಲಗುವವರೆಗೆ ಕಾದು ಕುಳಿತ ಕಾಮುಕ ಆಕೆಯ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿ ನಂತರ ಆಕೆ ಮೇಲೆ ಅತ್ಯಾಚಾರವೆಸಗಿದ್ದಾನೆ.
ಈ ದೃಶ್ಯ ಸಿಸಿ ಕ್ಯಾಮರಾದಲ್ಲಿ ದಾಖಲಾಗಿದೆ.
ಹಾಸನ ನಗರ ಠಾಣೆ ಪೆÇಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.